- TV9 Kannada Kannada News Photos Max Manju Introduce his new friend Kaajal Kunder from Mango Pachcha world
ಮ್ಯಾಕ್ಸ್ ಮಂಜುಗೆ ಸಿಕ್ಕರು ಹೊಸ ಗೆಳತಿ; ಎಲ್ಲರಿಗೂ ಪರಿಚಯಿಸಿದ ನಟ
ಉಗ್ರಂ ಮಂಜು ಎಂದಿದ್ದ ಹೆಸರನ್ನು ಈಗ ಅವರು ಮ್ಯಾಕ್ಸ್ ಮಂಜು ಎಂದು ಬದಲಾಯಿಸಿಕೊಂಡಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಮ್ಯಾಕ್ಸ್’ ಸಿನಿಮಾದ ಯಶಸ್ಸು. ಈಗ ಉಗ್ರಂ ಮಂಜು ಅವರು ತಮ್ಮ ಹೊಸ ಗೆಳತಿಯನ್ನು ಪರಿಚಯಿಸಿದ್ದಾರೆ. ಅವರು ಯಾರು? ಅವರ ಹಿನ್ನೆಲೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
Updated on:Apr 14, 2025 | 2:52 PM

ಉಗ್ರಂ ಮಂಜು ಅವರು ‘ಬಿಗ್ ಬಾಸ್’ ಬಳಿಕ ಹಲವು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರಲ್ಲಿ ‘ಮ್ಯಾಂಗೋ ಪಚ್ಚ’ ಚಿತ್ರ ಕೂಡ ಒಂದು. ಈ ಸಿನಿಮಾದ ನಾಯಕಿ ಕಾಜಲ್ ಕುಂದರ್ ಜೊತೆ ಇರೋ ಫೋಟೋಗಳನ್ನು ಮಂಜು ಅವರು ಹಂಚಿಕೊಂಡಿದ್ದಾರೆ.

ಕಾಜಲ್ ಜೊತೆ ಇರೋ ಫೋಟೋ ಪೋಸ್ಟ್ ಮಾಡಿರೋ ಮಂಜು ಅವರು, ‘ನನ್ನ ಹೊಸ ಗೆಳತಿ ಕಾಜಲ್ ಕುಂದರ್. ಮ್ಯಾಂಗೋ ಪಚ್ಚ ಸಿನಿಮಾದ ನಟಿ’ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

ಕಾಜಲ್ ಅವರು ಕನ್ನಡದ ನಟಿ. ಅವರು ಈ ಮೊದಲು ‘ಪೆಪೆ’, ‘ಮೇಘಾ’, ‘ಬಾಂಡ್ ರವಿ’ ರೀತಿಯ ಸಿನಿಮಾಗಳನ್ನು ಮಾಡಿದ್ದಾರೆ. ಈಗ ಅವರಿಗೆ ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ನಟಿಸೋ ಅವಕಾಶ ದೊರೆತಿದೆ. ಇದಕ್ಕಾಗಿ ಕಾಜಲ್ ಖುಷಿ ಆಗಿದ್ದಾರೆ.

ಮಂಜು ಹಾಗೂ ಕಾಜಲ್ ಅವರ ಸೀನ್ ಕಾಂಬಿನೇಷನ್ ಇತ್ತು. ಈ ಕಾರಣಕ್ಕೆ ಶೂಟಿಂಗ್ ಬ್ರೇಕ್ ಸಂದರ್ಭದಲ್ಲಿ ಕುಳಿತು ಹರಟೆ ಹೊಡೆದಿದ್ದಾರೆ. ಇವರ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ಉಗ್ರಂ ಮಂಜು ಪಾತ್ರ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬ ಕುತೂಹಲ ಇದೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಸುದೀಪ್ ಅವರ ಸೋದರ ಅಳಿಯ ಸಂಚಿತ್ ಸಂಜೀವ್ ಅವರು ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬರಲಿದೆ. ಇದು ಅವರು ನಟಿಸುತ್ತಿರೋ ಮೊದಲ ಸಿನಿಮಾ ಆಗಿದೆ.

ಉಗ್ರಂ ಮಂಜು ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗಿದ್ದರು. ಅವರಿಗೆ ಬಿಗ್ ಬಾಸ್ನಿಂದ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ದೊಡ್ಮನೆಯಲ್ಲಿ ಇರುವಾಗಲೇ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತು. ಅಂದಿನಿಂದ ಅವರು ಮ್ಯಾಕ್ಸ್ ಮಂಜು ಆಗಿದ್ದಾರೆ.
Published On - 2:51 pm, Mon, 14 April 25

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



