
ನಟಿ ಮೇಘಾ ಶೆಟ್ಟಿ ಅವರಿಗೆ ಕನ್ನಡ ಚಿತ್ರರಂಗದಲ್ಲಿ, ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಇತ್ತೀಚೆಗೆ ಬಹುಭಾಷಾ ನಟ ಆರ್. ಮಾಧವನ್ ಅವರನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದಲ್ಲಿ ತೆಗೆದ ಸೆಲ್ಫಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಅದ್ಭುತ ನಟನೊಂದಿಗೆ ಚರ್ಚೆ ಮಾಡುತ್ತಾ ಸಮಯ ಕಳೆದೆ. ಒಂದೊಳ್ಳೆಯ ಕಲಿಕೆಯ ಅನುಭವ’ ಎಂದು ಮೇಘಾ ಶೆಟ್ಟಿ ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಾಧವನ್ ಜೊತೆ ಸ್ಮೈಲ್ ಮಾಡಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಫೇಮಸ್ ಆದರು. ಮೇಘಾ ಶೆಟ್ಟಿ ಅವರು ಈ ಧಾರಾವಾಹಿಯಿಂದ ರಾಜ್ಯಾದ್ಯಂತ ಮನೆ ಮಾತಾದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಇದ್ದಾರೆ.

ಮೇಘಾ ಶೆಟ್ಟಿ ಅವರು ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಸದ್ಯ ಹಿರಿತೆರೆಯಲ್ಲಿ ಬ್ಯುಸಿ ಆಗಲು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ಹಲವು ಆಫರ್ಗಳು ಬರುತ್ತಿವೆ.

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಈ ಚಿತ್ರದ ಬಗ್ಗೆ ಮೇಘಾ ಶೆಟ್ಟಿ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಮೇಘಾ ಶೆಟ್ಟಿ ಅವರು ಆಗಾಗ ಗ್ಲಾಮರಸ್ ಫೋಟೋ ಹಂಚಿಕೊಂಡು ಕೂಡ ಗಮನ ಸೆಳೆಯುತ್ತಾರೆ. ಈ ಫೋಟೋಗಳು ವೈರಲ್ ಆಗುತ್ತವೆ.