ಸೆಂಟ್ರಲ್ ಏರ್ ಬ್ಯಾಗ್ ಕಂಟ್ರೋಲ್ ಯುನಿಟ್ (ಎಸಿಯು) ವಾಹನಗಳಲ್ಲಿ ಸೆನ್ಸಾರುಗಳನ್ನು ಮಾನಿಟರ್ ಮಾಡುತ್ತದೆ. ಏರ್ ಬ್ಯಾಗ್‌ಗಳು ಸ್ಟೀರಿಂಗ್ ಒಳಗಡೆ ಪ್ಲಾಸ್ಟಿಕ್ ರೀತಿಯಲ್ಲಿ ಇರುತ್ತೆ. ಅಪಘಾತ ವೇಳೆ ತಕ್ಷಣ ಹೊರಚಿಮ್ಮುವಂತೆ ವ್ಯವಸ್ಥೆ ಮಾಡಲಾಗಿದ್ದು, ಇದು ಸ್ಟೀರಿಂಗ್ ಮೇಲೆ ಬಂದಪ್ಪಳಿಸುವ ಪ್ರಯಾಣಿಕರ ಮುಖಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತದೆ. ಅಲ್ಲದೆ ತೆರೆಯಲ್ಪಟ್ಟ ಕ್ಷಣಾರ್ಧದಲ್ಲೇ ಮುದುಡಿಕೊಳ್ಳುತ್ತದೆ. ವಾಹನದ ಮುಂಭಾಗದ ಬಂಪರ್‌ನಲ್ಲಿರುವ ಸೆನ್ಸಾರ್ ಮೇಲೆ ಕೊಂಚ ಒತ್ತಡದ ಸ್ಪರ್ಶ ಬಿದ್ದರೂ ಏರ್ ಬ್ಯಾಗ್ ತೆರೆದುಕೊಳ್ಳುವಂತೆ ಮಾಡಲಾಗಿರುತ್ತದೆ. ಅದರಂತೆ ಹೆಬ್ಬಾಳ್ಕರ್ ಅಪಘಾತದಲ್ಲೂ ಸಹ ಕಾರಿನ ಎಲ್ಲಾ ಏರ್ ಬ್ಯಾಗ್‌ಗಳು ತೆರೆದುಕೊಂಡಿದ್ದು, ನಾಲ್ವರ ಜೀವ ಕಾಪಾಡಿವೆ.