- Kannada News Photo gallery Mission Majnu actress Rashmika Mandanna spotted in Mumbai wearing pink dress
Rashmika Mandanna: ಮುಂಬೈನಲ್ಲಿ ಹೆಚ್ಚಿದೆ ರಶ್ಮಿಕಾ ಮಂದಣ್ಣ ತಿರುಗಾಟ; ಕೊಡಗಿನ ಕುವರಿ ಹೋದಲ್ಲೆಲ್ಲ ಕ್ಯಾಮೆರಾ ಕಣ್ಣು
ರಶ್ಮಿಕಾ ಮಂದಣ್ಣ ಅವರು ಈಗ ಕೇವಲ ದಕ್ಷಿಣ ಭಾರತದ ಚಿತ್ರರಂಗಕ್ಕೆ ಸೀಮಿತವಲ್ಲ. ಅವರು ಬಾಲಿವುಡ್ನಲ್ಲೂ ಮಿಂಚುತ್ತಿದ್ದಾರೆ. ಹಿಂದಿ ಸಿನಿಮಾಗಳ ಕೆಲಸದ ಸಲುವಾಗಿ ಅವರು ಮುಂಬೈನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅವರು ಹೋದಲ್ಲೆಲ್ಲ ಪಾಪರಾಜಿ ಕ್ಯಾಮೆರಾಗಳು ಹಿಂಬಾಲಿಸುತ್ತಿವೆ.
Updated on: Nov 15, 2021 | 12:19 PM

Mission Majnu actress Rashmika Mandanna spotted in Mumbai wearing pink dress

Mission Majnu actress Rashmika Mandanna spotted in Mumbai wearing pink dress

ಅಮಿತಾಭ್ ಬಚ್ಚನ್ ಜೊತೆ ನಟಿಸುವ ಅವಕಾಶವನ್ನು ರಶ್ಮಿಕಾ ಮಂದಣ್ಣ ಪಡೆದುಕೊಂಡಿದ್ದಾರೆ. ‘ಗುಡ್ ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ರಶ್ಮಿಕಾ ಅವರು ತಂದೆ-ಮಗಳಾಗಿ ಕಾಣಿಸಿಕೊಳ್ಳಲಿದ್ದಾರೆ. (Photo Credit: Viral Bhayani)

ಸಿದ್ದಾರ್ಥ್ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ‘ಮಿಷನ್ ಮಜ್ನು’ ಚಿತ್ರಕ್ಕೆ ಶೂಟಿಂಗ್ ಮುಕ್ತಾಯಗೊಂಡಿದೆ. ಇದು ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಚಿತ್ರ. ಹಾಗಾಗಿ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. (Photo Credit: Viral Bhayani)

ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಅವುಗಳ ಶೂಟಿಂಗ್ನಲ್ಲೂ ಅವರು ಬ್ಯುಸಿ ಆಗಿದ್ದಾರೆ. (Photo Credit: Viral Bhayani)

ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪ’ ಚಿತ್ರ ಈ ವರ್ಷ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ.17ರಂದು ಬಿಡುಗಡೆ ಆಗಲಿದೆ. ಹಿಂದಿಗೂ ಡಬ್ ಆಗಿ ಈ ಸಿನಿಮಾ ರಿಲೀಸ್ ಆಗಲಿದೆ. (Photo Credit: Viral Bhayani)




