
ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚಿದ ಬಳಿಕ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬಾಲಿವುಡ್ನಿಂದಲೂ ಅವಕಾಶಗಳು ಬರುತ್ತಿವೆ. ಹಿಂದಿ ಚಿತ್ರರಂಗದಲ್ಲೂ ಅವರು ಸಕ್ರಿಯರಾಗಿದ್ದಾರೆ. (Photo Credit: Viral Bhayani)

ಬಾಲಿವುಡ್ ಸಿನಿಮಾಗಳಲ್ಲೂ ನಟಿಸುತ್ತಿರುವುದರಿಂದ ರಶ್ಮಿಕಾ ಮಂದಣ್ಣ ಅವರು ಮುಂಬೈನಲ್ಲೂ ಮನೆ ಕೊಂಡುಕೊಂಡಿದ್ದಾರೆ. ಬೆಂಗಳೂರು, ಹೈದರಾಬಾದ್ ಬಳಿಕ ಮುಂಬೈ ಕೂಡ ಅವರ ಆಪ್ತ ನಗರ ಆಗಿದೆ. (Photo Credit: Viral Bhayani)

ಅಮಿತಾಭ್ ಬಚ್ಚನ್ ಜೊತೆ ನಟಿಸುವ ಅವಕಾಶವನ್ನು ರಶ್ಮಿಕಾ ಮಂದಣ್ಣ ಪಡೆದುಕೊಂಡಿದ್ದಾರೆ. ‘ಗುಡ್ ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ರಶ್ಮಿಕಾ ಅವರು ತಂದೆ-ಮಗಳಾಗಿ ಕಾಣಿಸಿಕೊಳ್ಳಲಿದ್ದಾರೆ. (Photo Credit: Viral Bhayani)

ಸಿದ್ದಾರ್ಥ್ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ‘ಮಿಷನ್ ಮಜ್ನು’ ಚಿತ್ರಕ್ಕೆ ಶೂಟಿಂಗ್ ಮುಕ್ತಾಯಗೊಂಡಿದೆ. ಇದು ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಚಿತ್ರ. ಹಾಗಾಗಿ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. (Photo Credit: Viral Bhayani)

ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಅವುಗಳ ಶೂಟಿಂಗ್ನಲ್ಲೂ ಅವರು ಬ್ಯುಸಿ ಆಗಿದ್ದಾರೆ. (Photo Credit: Viral Bhayani)

ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪ’ ಚಿತ್ರ ಈ ವರ್ಷ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ.17ರಂದು ಬಿಡುಗಡೆ ಆಗಲಿದೆ. ಹಿಂದಿಗೂ ಡಬ್ ಆಗಿ ಈ ಸಿನಿಮಾ ರಿಲೀಸ್ ಆಗಲಿದೆ. (Photo Credit: Viral Bhayani)