Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ

| Updated By: ಮದನ್​ ಕುಮಾರ್​

Updated on: Jan 11, 2023 | 3:41 PM

Golden Globes Photos | RRR Movie: ಲಾಸ್​ ಏಂಜಲಿಸ್​ನಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆದಿದ್ದಾರೆ.

1 / 6
ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

2 / 6
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

3 / 6
ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

4 / 6
ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

5 / 6
ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

6 / 6
2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.