AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Visit: ಮೊರ್ಬಿದ ತೂಗು ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಮೋದಿ

ಗುಜರಾತ್​ನ ಮೊರ್ಬಿ ಜಿಲ್ಲೆಯಲ್ಲಿರುವ ತೂಗು ಸೇತುವೆ ಕುಸಿದು 141 ಮಂದಿ ಬಲಿಯಾಗಿದ್ದು, ಘಟನಾ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 01, 2022 | 6:19 PM

Share
ಮೋರ್ಬಿ ಸೇತುವೆ ಕುಸಿತ 100 ಕ್ಕೂ ಹೆಚ್ಚು ಜನರು ಮೋರ್ಬಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರನೇ ದಿನವೂ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Modi visited the site of the collapsed suspension bridge

1 / 7
ಎರಡು ದಿನಗಳ ಹಿಂದೆ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ತೂಗು ಸೇತುವೆ ಕುಸಿದು 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಮತ್ತು ಹಲವರು ಗಾಯಗೊಂಡಿದ್ದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭೇಟಿ ನೀಡಿದರು.

Modi visited the site of the collapsed suspension bridge

2 / 7
Modi visited the site of the collapsed suspension bridge

ಉನ್ನತ ಮಟ್ಟದ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್, ಗೃಹ ಸಚಿವ ಹರ್ಷ ಸಂಘವಿ, ಗುಜರಾತ್ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ, ರಾಜ್ಯದ ಗೃಹ ಇಲಾಖೆ ಮತ್ತು ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

3 / 7
Modi visited the site of the collapsed suspension bridge

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ಪ್ರಧಾನಿ ಈ ಹಿಂದೆಯೇ ಹೇಳಿದ್ದರು. ಸೇತುವೆ ಕುಸಿತದ ಘಟನೆಯ ತನಿಖೆಗಾಗಿ ಗುಜರಾತ್ ಸರ್ಕಾರವು ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.

4 / 7
Modi visited the site of the collapsed suspension bridge

ಪ್ರಧಾನಿ ಭೇಟಿಯ ನಿರೀಕ್ಷೆಯಲ್ಲಿ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲಾಗಿದೆ ಎನ್ನಲಾಗಿದೆ. ಸ್ವಚ್ಛತೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.

5 / 7
Modi visited the site of the collapsed suspension bridge

ಈ ಸಮಯದಲ್ಲಿ ಅವರೊಂದಿಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಇದ್ದರು. ಮೋರ್ಬಿಯಲ್ಲಿ ಅಪಘಾತ ಸಂಭವಿಸಿದಾಗ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದವರನ್ನು ಪ್ರಧಾನಿ ಭೇಟಿ ಮಾಡಿದರು. ನಂತರ ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದರು.

6 / 7
Modi visited the site of the collapsed suspension bridge

ಮೋರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ಒರೆವಾ ಅಧಿಕಾರಿಗಳು, ಸೇತುವೆಯನ್ನು ನವೀಕರಿಸಿದ ಕಂಪನಿ, ಟಿಕೆಟ್ ಮಾರಾಟಗಾರರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ.

7 / 7

Published On - 6:19 pm, Tue, 1 November 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ