Narendra Modi Visit: ಮೊರ್ಬಿದ ತೂಗು ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಮೋದಿ
ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿರುವ ತೂಗು ಸೇತುವೆ ಕುಸಿದು 141 ಮಂದಿ ಬಲಿಯಾಗಿದ್ದು, ಘಟನಾ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Updated on:Nov 01, 2022 | 6:19 PM

Modi visited the site of the collapsed suspension bridge

Modi visited the site of the collapsed suspension bridge

ಉನ್ನತ ಮಟ್ಟದ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್, ಗೃಹ ಸಚಿವ ಹರ್ಷ ಸಂಘವಿ, ಗುಜರಾತ್ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ, ರಾಜ್ಯದ ಗೃಹ ಇಲಾಖೆ ಮತ್ತು ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ಪ್ರಧಾನಿ ಈ ಹಿಂದೆಯೇ ಹೇಳಿದ್ದರು. ಸೇತುವೆ ಕುಸಿತದ ಘಟನೆಯ ತನಿಖೆಗಾಗಿ ಗುಜರಾತ್ ಸರ್ಕಾರವು ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.

ಪ್ರಧಾನಿ ಭೇಟಿಯ ನಿರೀಕ್ಷೆಯಲ್ಲಿ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲಾಗಿದೆ ಎನ್ನಲಾಗಿದೆ. ಸ್ವಚ್ಛತೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.

ಈ ಸಮಯದಲ್ಲಿ ಅವರೊಂದಿಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಇದ್ದರು. ಮೋರ್ಬಿಯಲ್ಲಿ ಅಪಘಾತ ಸಂಭವಿಸಿದಾಗ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದವರನ್ನು ಪ್ರಧಾನಿ ಭೇಟಿ ಮಾಡಿದರು. ನಂತರ ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದರು.

ಮೋರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ಒರೆವಾ ಅಧಿಕಾರಿಗಳು, ಸೇತುವೆಯನ್ನು ನವೀಕರಿಸಿದ ಕಂಪನಿ, ಟಿಕೆಟ್ ಮಾರಾಟಗಾರರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ.
Published On - 6:19 pm, Tue, 1 November 22




