- Kannada News Photo gallery Mohan Juneja Death: Hombale Films extends financial help to KGF Chapter 2 actor Mohan Juneja family
ಮೋಹನ್ ಜುನೇಜ ನಿಧನ: ‘ಕೆಜಿಎಫ್ 2’ ನಟನ ಕುಟುಂಬಕ್ಕೆ 50 ಸಾವಿರ ರೂ. ನೀಡಿದ ‘ಹೊಂಬಾಳೆ ಫಿಲ್ಮ್ಸ್’
‘ಕೆಜಿಎಫ್’ ಸಿನಿಮಾದಲ್ಲಿ ನಟಿಸಿದ್ದ ಮೋಹನ್ ಜುನೇಜ ಅವರಿಗೆ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಅಷ್ಟೇ ಅಲ್ಲದೇ, ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗಿದೆ.
Updated on: May 07, 2022 | 3:41 PM

Mohan Juneja Death: Hombale Films extends financial help to KGF Chapter 2 actor Mohan Juneja family

Mohan Juneja Death: Hombale Films extends financial help to KGF Chapter 2 actor Mohan Juneja family

ಮೋಹನ್ ಜುನೇಜ ಅವರ ಮರಣದ ಸುದ್ದಿ ತಿಳಿಯುತ್ತಿದ್ದಂತೆಯೇ ‘ಕೆಜಿಎಫ್ 2’ ಸಿನಿಮಾದ ನಿರ್ಮಾಪಕರು ಅವರ ಕುಟುಂಬಕ್ಕೆ ನೆರವಾಗಿದ್ದಾರೆ. ಈ ಕಷ್ಟದ ಸಂದರ್ಭದಲ್ಲಿ 50 ಸಾವಿರ ರೂಪಾಯಿ ನೀಡುವ ಮೂಲಕ ಸಹಾಯ ಮಾಡಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯವರು ಬಂದು ಹಣ ನೀಡಿದ್ದಾರೆ.

‘ಕನ್ನಡದ ಖ್ಯಾತ ಹಾಸ್ಯ ನಟರಾದ ಮೋಹನ್ ಜುನೇಜ ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ಕೆಜಿಎಫ್ ಚಿತ್ರತಂಡದ ಜತೆಗಿನ ಅವರ ಅವಿನಾಭಾವ ಸಂಬಂಧ ಮರೆಯಲಾರೆವು. ಕನ್ನಡ ಚಿತ್ರರಂಗದಲ್ಲಿ ಅವರು ಜನಪ್ರಿಯರಾಗಿದ್ದರು. ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಮತ್ತು ಹಿತೈಷಿಗಳಿಗೆ ನಮ್ಮ ಸಾಂತ್ವನಗಳು’ ಎಂದು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಟ್ವೀಟ್ ಮಾಡಿದೆ.

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಯಾವಾಗಲೂ ಚಿತ್ರರಂಗದ ಕಾರ್ಮಿಕರು, ಕಲಾವಿದರು ಮತ್ತು ತಂತ್ರಜ್ಞರ ಪರವಾಗಿ ನಿಂತಿದೆ. ಈ ಹಿಂದೆ ಲಾಕ್ ಡೌನ್ ಸಂದರ್ಭದಲ್ಲಿಯೂ ನೂರಾರು ಜನರಿಗೆ ಈ ಸಂಸ್ಥೆ ವತಿಯಿಂದ ಸಹಾಯ ಮಾಡಲಾಗಿತ್ತು. ಈಗ ಮೋಹನ್ ಜುನೇಜ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದೆ.




