ಶಾರುಖ್ ಖಾನ್, ಮೋಹನ್ಲಾಲ್ ಸಿಹಿ ಅಪ್ಪುಗೆ: ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದ ವಿಶೇಷ ಫೋಟೋಗಳು
2023ರ ಸಾಲಿನ ಸಿನಿಮಾಗಳಿಗೆ ಇಂದು (ಸೆಪ್ಟೆಂಬರ್ 23) ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೋಹನ್ಲಾಲ್ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದರು. ಶಾರುಖ್ ಖಾನ್ ಹಾಗೂ ವಿಕ್ರಾಂತ್ ಮಾಸಿ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ನೀಡಲಾಯಿತು. ‘ಅತ್ಯುತ್ತಮ ನಟಿ’ ಪ್ರಶಸ್ತಿಯು ರಾಣಿ ಮುಖರ್ಜಿ ಅವರ ಕೈ ಸೇರಿತು.
Updated on: Sep 23, 2025 | 9:14 PM

ಮಲಯಾಳಂ ಸ್ಟಾರ್ ನಟ ಮೋಹನ್ಲಾಲ್ ಮತ್ತು ಬಾಲಿವುಡ್ ನಟ ಶಾರುಖ್ ಖಾನ್ ಅವರು 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ಭೇಟಿಯಾದರು. ಅವರಿಬ್ಬರ ಸಿಹಿ ಅಪ್ಪುಗೆಯ ಕ್ಷಣದ ಫೋಟೋ ವೈರಲ್ ಆಗಿದೆ.

ಪ್ರಮುಖ ಪ್ರಶಸ್ತಿಗಳನ್ನು ಪಡೆದ ವಿಕ್ರಾಂತ್ ಮಾಸಿ, ರಾಣಿ ಮುಖರ್ಜಿ, ಶಾರುಖ್ ಖಾನ್ ಮತ್ತು ಮೋಹನ್ಲಾಲ್ ಅವರು ಒಂದೇ ಸಾಲಿನಲ್ಲಿ ಕುಳಿತಿದ್ದರು. ವಿಕ್ರಾಂತ್ ಮಾಸಿ ಮತ್ತು ಮೋಹನ್ಲಾಲ್ ಅವರು ಕೈ ಕುಲುಕಿ ಮಾತನಾಡಿದರು.

ನಟ ಶಾರುಖ್ ಖಾನ್ ಅವರಿಗೆ ಸಿಕ್ಕ ಮೊದಲ ರಾಷ್ಟ್ರ ಪ್ರಶಸ್ತಿ ಇದು. ‘ಜವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದುಕೊಂಡರು. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಚಿತ್ರರಂಗಕ್ಕೆ ಮೋಹನ್ಲಾಲ್ ಅವರು ನೀಡಿರುವ ಕೊಡುಗೆ ಅಪಾರ. ಅವರ ಸಾಧನೆಯನ್ನು ಗುರುತಿಸಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ನೀಡಲಾಗಿದೆ. ಇದು ಭಾರತೀಯ ಚಿತ್ರರಂಗದಲ್ಲಿನ ಅತ್ಯುನ್ನತ ಗೌರವ.

ರಾಣಿ ಮುಖರ್ಜಿ ಅವರು ‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಲ್ಲರಿಗೂ ಪ್ರಶಸ್ತಿ ಪ್ರದಾನ ಮಾಡಿದರು.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More




