- TV9 Kannada Photo gallery Moksha Kushal Acting In Dhananjay Starrer Kotee Movie Here is her Background Movies Age
Moksha Kushal: ‘ಕೋಟಿ’ಗೆ ಜೊತೆಯಾದ ಮೋಕ್ಷಾ; ನಟಿಯ ಹಿನ್ನಲೆ ಬಗ್ಗೆ ಇಲ್ಲಿದೆ ವಿವರ
ಮೋಕ್ಷಾ ಅವರು ಈಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಧನಂಜಯ್ ಜೊತೆ ನಟಿಸೋ ಅವಕಾಶ ಸಿಕ್ಕಿದೆ. ನವಮಿ ಅನ್ನೋದು ಅವರ ಸಿನಿಮಾದ ಪಾತ್ರದ ಹೆಸರು. ಈ ಚಿತ್ರ ಗಮನ ಸೆಳೆಯುವ ಸೂಚನೆ ಸಿಕ್ಕಿದೆ.
Updated on:Apr 15, 2024 | 11:09 AM

ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಜೂನ್ 14ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಮೊಲದು ಕಲರ್ಸ್ ಕನ್ನಡದ ಮುಖ್ಯಸ್ಥರಾಗಿದ್ದ ಪರಮ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಮೋಕ್ಷಾ ಕುಶಾಲ್ ನಾಯಕಿ.

ಮೋಕ್ಷಾ ಅವರು ಈಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಧನಂಜಯ್ ಜೊತೆ ನಟಿಸೋ ಅವಕಾಶ ಸಿಕ್ಕಿದೆ. ನವಮಿ ಅನ್ನೋದು ಅವರ ಸಿನಿಮಾದ ಪಾತ್ರದ ಹೆಸರು. ಈ ಚಿತ್ರ ಗಮನ ಸೆಳೆಯುವ ಸೂಚನೆ ಸಿಕ್ಕಿದೆ.

ಮೋಕ್ಷಾ ಕುಶಾಲ್ ಅವರಿಗೆ ಜಾಹೀರಾತುಗಳಲ್ಲಿ ನಟಿಸಿದ ಅನುಭವ ಇದೆ. ಅವರು ಕೊಡಗು ಮೂಲದವರು. ಅವರಿಗೆ ಸಿನಿಮಾ ರಂಗದಲ್ಲಿ ಗೆಲುವು ಕಾಣಲು ಈ ಚಿತ್ರ ಸಾಕಷ್ಟು ಮುಖ್ಯವಾಗಲಿದೆ.

ಮೋಕ್ಷಾ ಕುಶಾಲ್ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸದ್ಯ ಅವರನ್ನು ಸುಮಾರು 40 ಸಾವಿರ ಹಿಂಬಾಲಕರು ಪಾಲಿಸುತ್ತಿದ್ದಾರೆ.

ಮೋಕ್ಷಾ ಕುಶಾಲ್ ಅವರು ಇನ್ಸ್ಟಾಗ್ರಾಮ್ನಲ್ಲಿ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಭರ್ಜರಿ ಲೈಕ್ಸ್ ಸಿಕ್ಕಿದೆ.
Published On - 11:09 am, Mon, 15 April 24

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More



