
‘ಗೋಲ್ಡನ್ ಸ್ಟಾರ್’ ಗಣೇಶ್ ಮತ್ತು ನಟಿ ಅಮೂಲ್ಯ ಕುಟುಂಬದ ನಡುವೆ ಒಡನಾಟ ಇದೆ. ಹಲವು ವಿಶೇಷ ಸಂದರ್ಭಗಳಲ್ಲಿ ಈ ಎರಡೂ ಕುಟುಂಬದ ಸದಸ್ಯರು ಜೊತೆಯಾಗಿ ಸೇರುತ್ತಾರೆ.

ನಟಿ ಅಮೂಲ್ಯ ಅವರೀಗ ತುಂಬು ಗರ್ಭಿಣಿ. ಮೊದಲ ಮಗುವಿನ ನಿರೀಕ್ಷೆಯಲ್ಲಿ ಅವರಿದ್ದಾರೆ. ಅಮೂಲ್ಯ ಜೊತೆಗಿರುವ ಕೆಲವು ಫೋಟೋಗಳನ್ನು ಶಿಲ್ಪಾ ಗಣೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ಅಮೂಲ್ಯ. ‘ಚೆಲುವಿನ ಚಿತ್ತಾರ’, ‘ನಾನು ನನ್ನ ಕನಸು’, ‘ಗಜ ಕೇಸರಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡುತ್ತಿದ್ದಾರೆ.

ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ವಿಚಾರವನ್ನು ಕೆಲವೇ ದಿನಗಳ ಹಿಂದೆ ಅಮೂಲ್ಯ ಮತ್ತು ಜಗದೀಶ್ ದಂಪತಿ ತಿಳಿಸಿದ್ದರು. ವಿಶೇಷ ಫೋಟೋಶೂಟ್ ಮೂಲಕ ಸಿಹಿ ಸುದ್ದಿ ಹಂಚಿಕೊಂಡಿದ್ದರು.