- Kannada News Photo gallery Most awaited iQoo Neo 7 Pro will be launching on July 4 Today in India check expected price
iQoo Neo 7 Pro: ಭಾರತದಲ್ಲಿಂದು ಬಹುನಿರೀಕ್ಷಿತ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ: ಬೆಲೆ ಎಷ್ಟಿರಬಹುದು?
ಐಕ್ಯೂ ನಿಯೋ 7 ಪ್ರೊ ಕಳೆದ ವರ್ಷ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗ. ತನ್ನ ಫಾಸ್ಟ್ ಚಾರ್ಜರ್ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಹೊಸ ಫೋನ್ ಇಂದು ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.
Updated on: Jul 04, 2023 | 6:55 AM

ವಿವೋ ಒಡೆತನದ ಐಕ್ಯೂ ಕಂಪನಿ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿದೆ. ಅಪರೂಪಕ್ಕೆ ಆಕರ್ಷಕ ಮೊಬೈಲ್ಗಳನ್ನು ಬಿಡುಗಡೆ ಮಾಡುವ ವಿವೋ ಇದೀಗ ಹೊಸ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್ಫೋನ್ ಅನ್ನು ರಿಲೀಸ್ ಮಾಡಲು ಮುಂದಾಗಿದೆ.

ಐಕ್ಯೂ ನಿಯೋ 7 ಪ್ರೊ ಕಳೆದ ವರ್ಷ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗ. ತನ್ನ ಫಾಸ್ಟ್ ಚಾರ್ಜರ್ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಹೊಸ ಫೋನ್ ಇಂದು ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.

ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್ E5 ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್ ಹೊಂದಿದೆ ಎಂದು ಹೇಳಲಾಗಿದೆ.

ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್ 1 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಇದು ಗೇಮಿಂಗ್ಗೆ ಹೇಳಿ ಮಾಡಿಸಿದ್ದಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ ಸ್ಯಾಮ್‌ಸಂಗ್ GN5 ಸೆನ್ಸರ್ ಆಯ್ಕೆಯ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನು ಹೊಂದಿರಲಿದೆ ಎಂಬ ಮಾತಿದೆ.

ಈ ಫೋನ್ ಡ್ಯುಯಲ್ ಕ್ಯಾಮೆರಾ ಹೊಂದಿರಲಿದೆಯೋ ಅಥವಾ ಟ್ರಿಪಲ್ ಕ್ಯಾಮೆರಾ ಹೊಂದಿರಲಿದೆಯೋ ಎಂಬ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.

120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ ಎಂದು ಹೇಳಲಾಗುತ್ತಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.




