- Kannada News Photo gallery Moto E13 New variant with 8GB RAM and 128GB storage will be available at Rs 8,999
ಕೇವಲ 8,999 ರೂ.: ಹೊಸ ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ ಮೋಟೋ E13 ಫೋನ್
Moto E13 128GB storage variant: ಇದೀಗ ಮೋಟೋ E13 ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದಲ್ಲಿ ಬಿಡುಗಡೆ ಆಗಿದೆ. ಇದರ ಬೆಲೆ ಕೇವಲ 8,999 ರೂ. ಆಗಿದೆ. ಈ ಫೋನ್ ಆಗಸ್ಟ್ 16 ರಿಂದ ಖರೀದಿಗೆ ಲಭ್ಯವಿರುತ್ತದೆ.
Updated on: Aug 15, 2023 | 6:55 AM

ಪ್ರಸಿದ್ಧ ಮೋಟೋರೊಲಾ ಕಂಪನಿ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಮೊಬೈಲ್ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್ಗಳನ್ನು ರಿಲೀಸ್ ಮಾಡುತ್ತಿರುವ ಮೋಟೋ ಕೆಲ ತಿಂಗಳ ಹಿಂದೆ ತನ್ನ E ಸರಣಿಯಲ್ಲಿ ಮೋಟೋ E13 ಎಂಬ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿ ಸದ್ದು ಮಾಡಿತ್ತು.

ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E13 ಸ್ಮಾರ್ಟ್‌ಫೋನ್ ಭರ್ಜರಿ ಸೇಲ್ ಕೂಡ ಆಗಿತ್ತು. ಆರಂಭದಲ್ಲಿ ಕೇವಲ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದ್ದ ಈ ಫೋನ್ ಇದೀಗ ತನ್ನ ನೂತನ ವೇರಿಯೆಂಟ್ ಒಂದನ್ನು ಅನಾವರಣ ಮಾಡಿದೆ. ಇದು 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯದ್ದಾಗಿದೆ.

ಇದೀಗ ಮೋಟೋ E13 ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದಲ್ಲಿ ಬಿಡುಗಡೆ ಆಗಿದೆ. ಇದರ ಬೆಲೆ ಕೇವಲ 8,999 ರೂ. ಆಗಿದೆ. ಈ ಫೋನ್ ಆಗಸ್ಟ್ 16 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್, ಮೋಟೋರೊಲಾದ ಅಧಿಕೃತ ವೆಬ್ಸೈಟ್ ಮತ್ತು ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ.

ಮೋಟೋ E13 ಸ್ಮಾರ್ಟ್‌ಫೋನ್ ಭಾರತದಲ್ಲಿ ಈ ಹಿಂದೆ ಎರಡು ಸ್ಟೋರೇಜ್ ಆಯ್ಕೆಯನ್ನು ರಿಲೀಸ್ ಆಗಿತ್ತು. ಇದರ 2GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಯ ಬೆಲೆ 6,999 ರೂ. ಆಗಿದೆ. ಅಂತೆಯೆ 4GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯಕ್ಕೆ 7,999 ರೂ. ಇದೆ.

ಈ ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಆಕ್ಟಾ-ಕೋರ್ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 OS ಜೊತೆಗೆ ರನ್ ಆಗಲುತ್ತಿದ್ದು 1TB ವರೆಗೆ ಮೆಮೋರಿಯನ್ನು ಹೆಚ್ಚಿಸಬಹುದಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಮೋಟೋ E13 ಸ್ಮಾರ್ಟ್‌ಫೋನ್ ಸಿಂಗಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳ ಮೂಲಕ 30fps ಫುಲ್ HD ವಿಡಿಯೋವನ್ನು ರೆಕಾರ್ಡಿಂಗ್ ಮಾಡಬಹುದು. ಜೊತೆಗೆ ಪನೋರಮ, ಪೋಟ್ರೆಟ್, ನೈಟ್ ವರ್ಷನ್, ಡ್ಯುಯೆಲ್ ಕಾಪ್ಚರ್, ಲೈವ್ ಫಿಲ್ಟರ್ ಸೇರಿದಂತೆ ಅನೇಕ ಆಯ್ಕೆಗಳಿವೆ.

ಮೋಟೋ E13 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದಿದೆ. ಇದು 10W ಚಾರ್ಜಿಂಗ್ ವೇಗವನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್, ವೈಫೈ, ಬ್ಲೂಟೂತ್ v5.0 ಬೆಂಬಲ ಪಡೆದುಕೊಂಡಿದೆ. ಇದು 5ಜಿ ಬೆಂಬಲ ಪಡೆದುಕೊಂಡಿಲ್ಲ.

ಮೋಟೋ E13 ಸ್ಮಾರ್ಟ್‌ಫೋನ್ 4G VoLTE ಸಪೋರ್ಟ್ ಮಾಡುತ್ತದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ನೊಂದಿಗೆ ಲಗ್ಗೆಯಿಟ್ಟಿದೆ. ಸದ್ಯ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಉತ್ತಮ ಫೀಚರ್ಗಳ ಕೆಲವೇ ಕೆಲವು ಸ್ಮಾರ್ಟ್ಫೋನ್ಗಳ ಸಾಲಿಗೆ ಇದು ಕೂಡ ಸೇರ್ಪಡೆಯಾಗಿದೆ.



















