- Kannada News Photo gallery Motorola company unveiled the Moto S30 Pro as a mid-range premium smartphone
Moto S30 Pro: 50MP ಕ್ಯಾಮೆರಾ, 68W ಫಾಸ್ಟ್ ಚಾರ್ಜರ್: ಮೋಟೋ S30 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ
ಮೋಟೋರೊಲಾ ಕಂಪನಿ ಸದ್ದಿಲ್ಲದೆ ಭಾರತದಲ್ಲಿ ತನ್ನ ಹೊಸ ಮೋಟೋ S30 ಪ್ರೊ ಅನ್ನು ಲಾಂಚ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ನೀಡಲಾಗಿದೆ.
Updated on: Aug 13, 2022 | 6:05 AM

ಮೋಟೋರೊಲಾ ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಎರಡು ದಿನಗಳ ಹಿಂದೆಯಷ್ಟೆ ಮೋಟೋರೊಲಾ ಕಂಪನಿ ಸದ್ದಿಲ್ಲದೆ ಭಾರತದಲ್ಲಿ ತನ್ನ ಹೊಸ ಮೋಟೋ G32 ಮತ್ತು G62 ಸ್ಮಾರ್ಟ್ ಫೋನ್ ಅನ್ನು ಅನಾವರಣ ಮಾಡಿತ್ತು. ಜೊತೆಗೆ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೋಟೋ X30 ಪ್ರೊ ರಿಲೀಸ್ ಮಾಡಿತ್ತು. ಇದೀಗ ಹೊಸ ಮೋಟೋ S30 ಪ್ರೊ ಅನ್ನು ಲಾಂಚ್ ಮಾಡಿದೆ.

ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ನೀಡಲಾಗಿದೆ. ಸದ್ಯಕ್ಕೆ ಚೀನಾದಲ್ಲಿ ಬಿಡುಗಡೆಗೊಂಡಿರುವ ಫೋನಿನ8GB + 128GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ CNY 2,199, ಅಂದರೆ ಭಾರತದಲ್ಲಿ ಸುಮಾರು 26,000ರೂ. ಎನ್ನಬಹುದು.

ಮೋಟೋ S30 ಪ್ರೊ ಸ್ಮಾರ್ಟ್ ಫೋನ್ 6.55 ಇಂಚಿನ ಫುಲ್ ಹೆಚ್ ಡಿ ಪ್ಲಸ್ ಡಿಸ್ ಪ್ಲೇ ಹೊಂದಿದೆ. ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದೆ.

ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 888 ಪ್ಲಸ್ ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ MyU ಬೆಂಬಲಿಸಲಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಓಮ್ನಿವಿಷನ್ OV50A ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13MP ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಹೊಂದಿದೆ. 32MP ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಮೋಟೋ S30 ಪ್ರೊ ಫೋನಿಗೆ 4,270mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದ್ದು, 68W ವೇಗದ ವೈರ್ಡ್ ಚಾರ್ಜಿಂಗ್ ಬೆಂಬಲವಿದೆ. ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್ ನೀಡಲಾಗಿದೆ.




