AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆಯ ಸಿನಿಮಾಗಳು, ಇಲ್ಲಿವೆ ಪಟ್ಟಿ

OTT movies: ಯುದ್ಧದ ಪರಿಸ್ಥಿತಿಯಲ್ಲಿರುವ ಕಾರಣ ನಿರ್ಮಾಪಕರು ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇದು ಒಟಿಟಿಗಳಿಗೆ ವರವಾಗಿ ಪರಿಣಮಿಸಿದೆ. ಇದೇ ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಒಟಿಟಿಗಳು ಈ ಸಮಯದಲ್ಲಿ ಕೆಲ ಒಳ್ಳೆಯ ಸಿನಿಮಾಗಳನ್ನು ಒಟಿಟಿಗೆ ತಂದಿವೆ. ಈ ವಾರವೂ ಕೆಲ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬಂದಿದ್ದು, ಅದರಲ್ಲಿ ಕೆಲವು ಕನ್ನಡ ಸಿನಿಮಾಗಳು ಸಹ ಇವೆ.

ಮಂಜುನಾಥ ಸಿ.
|

Updated on: May 11, 2025 | 4:51 PM

ಯೋಗರಾಜ್ ಭಟ್ ನಿರ್ದೇಶನ ಮಾಡಿ ಇ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಈ ವಾರದಿಂದ ಭಾರತದಲ್ಲಿ ಈ ಸಿನಿಮಾ ವೀಕ್ಷಿಸಬಹುದಾಗಿದೆ. ಈ ಸಿನಿಮಾ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ಕೆಲ ಹಾಡುಗಳ ಹಿಟ್ ಆಗಿದ್ದವು.

ಯೋಗರಾಜ್ ಭಟ್ ನಿರ್ದೇಶನ ಮಾಡಿ ಇ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಈ ವಾರದಿಂದ ಭಾರತದಲ್ಲಿ ಈ ಸಿನಿಮಾ ವೀಕ್ಷಿಸಬಹುದಾಗಿದೆ. ಈ ಸಿನಿಮಾ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ಕೆಲ ಹಾಡುಗಳು ಹಿಟ್ ಆಗಿದ್ದವು.

1 / 5
ಧನ್ವೀರ್ ಗೌಡ ನಟಿಸಿರುವ ‘ವಾಮನ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ವಾಮನ’ ಸಿನಿಮಾ ಅನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಕರು ನೋಡಬಹುದಾಗಿದೆ. ಈ ಸಿನಿಮಾ ತಾಯಿ ಮತ್ತು ಮಗನ ನಡುವಿನ ಸಂಬಂಧದ ಕತೆ ಹೊಂದಿದೆ.

2 / 5
ಬರಗೂರು ರಾಮಚಂದ್ರ ಅವರು ನಿರ್ದೇಶನ ಮಾಡಿರುವ ಪ್ರಶಸ್ತಿ ವಿಜೇತ ಸಿನಿಮಾ ‘ಅಮೃತಮತಿ’ ಈ ವಾರ ಒಟಿಟಿಗೆ ಬಂದಿದೆ. ಆದರೆ ಇದನ್ನು ಹಣ ಕೊಟ್ಟು ನೋಡಬೇಕಾಗಿದೆ. ಈ ಸಿನಿಮಾ ಸಹ ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಲಭ್ಯವಿದೆ. ಜನ್ನ ಕವಿಯ ಯಶೋಧರ ಚರಿತ ಆಧರಿಸಿದ ಸಿನಿಮಾ ಇದಾಗಿದೆ.

3 / 5
ಕನ್ನಡದ ವಸಿಷ್ಠ ಸಿಂಹ ಮತ್ತು ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ನಟಿಸಿರುವ ತೆಲುಗು ಸಿನಿಮಾ ‘ಒದೆಲ 2’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಹಾರರ್ ಥ್ರಿಲ್ಲರ್ ಸಿನಿಮಾ ಆಗಿರುವ ಇದು ಚಿತ್ರಮಂದಿರಗಳಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 5
ತಮಿಳಿನ ಸೂಪರ್ ಸ್ಟಾರ್ ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ತಿಂಗಳಲ್ಲೇ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು ಈ ಸಿನಿಮಾ. ಈ ಸಿನಿಮಾ ಈ ವಾರದಿಂದ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!

ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್

ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ

ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?

ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ