- Kannada News Photo gallery Mukesh Ambani Nita Ambani hold mass wedding for 50 couples ahead of Anant Ambani and Radhika Merchant Marriage
ಅನಂತ್ ಅಂಬಾನಿ- ರಾಧಿಕಾ ಮರ್ಚಂಟ್ ಮದುವೆಗೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ
ಭಾರತದ ಶ್ರೀಮಂತ ಉದ್ಯಮಿಯಾಗಿರುವ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈನಲ್ಲಿ ವಿವಾಹವಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬದಿಂದ ಇಂದು ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಲಾಗಿತ್ತು. ಅದರ ಫೋಟೋಗಳು ಇಲ್ಲಿವೆ.
Updated on: Jul 02, 2024 | 7:21 PM

ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12ನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ.

ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿಯವರ ಮದುವೆಗೂ ಮುಂಚಿತವಾಗಿ ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಇಂದು (ಜುಲೈ 2) ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 50ಕ್ಕೂ ಹೆಚ್ಚು ಬಡ ಕುಟುಂಬದ ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಆಯೋಜಿಸಿದ್ದರು.

ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಬೈನಿಂದ 100 ಕಿ.ಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ 50ಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು.

ಥಾಣೆಯ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್‌ನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವು ದಂಪತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ಸುಮಾರು 800 ಜನರ ಸಮ್ಮುಖದಲ್ಲಿ ನಡೆಯಿತು.

ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ, ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ, ಇಶಾ ಅಂಬಾನಿ ಮತ್ತು ಆನಂದ್ ಪಿರಮಾಳ್ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅನಂತ್- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ. ಈ ಬಗ್ಗೆ ಅಂಬಾನಿ ಕುಟುಂಬ ಸಂಕಲ್ಪವನ್ನೇ ಮಾಡಿದ್ದಾರೆ.

ಅಂದ ಹಾಗೆ ಮುಂಬೈನಲ್ಲಿ ನಡೆದ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡಿದ್ದರು ಮತ್ತು ನವ ವಿವಾಹಿತ ಜೋಡಿಗಳಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.

ಈ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರ, ಮೂಗುತಿ ಸೇರಿದಂತೆ ಚಿನ್ನಾಭರಣಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲ್ಗೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು.

ಇದರ ಜತೆಗೆ ಪ್ರತಿ ವಧುವಿಗೆ ರೂ. 1.1 ಲಕ್ಷ (ಒಂದು ಲಕ್ಷದ ಒಂದು ಸಾವಿರ) ಹಣವನ್ನು ಕೂಡ ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು.

ಹಾಗೇ, ಪ್ರತಿ ದಂಪತಿಗೂ 1 ವರ್ಷಕ್ಕೆ ಸಾಕಾಗುವಂಥ ದಿನಸಿ, ಗೃಹೋಪಯೋಗಿ ವಸ್ತುಗಳನ್ನು ಕೊಡಲಾಯಿತು. ಈ ಗೃಹೋಪಯೋಗಿ ವಸ್ತುಗಳಲ್ಲಿ 36 ಅಗತ್ಯ ವಸ್ತುಗಳು ಮತ್ತು ಪಾತ್ರೆಗಳು, ಗ್ಯಾಸ್ ಸ್ಟೌವ್, ಮಿಕ್ಸರ್ ಮತ್ತು ಫ್ಯಾನ್, ಹಾಗೆಯೇ ಹಾಸಿಗೆ ಮತ್ತು ದಿಂಬುಗಳು ಕೂಡ ಇದ್ದವು.




