ಮೈಸೂರು ದಸರಾ 2023: ಅರಮನೆಗೆ ಎಂಟ್ರಿ ಕೊಟ್ಟ ಗಜಪಡೆಗೆ ಅದ್ಧೂರಿ ಸ್ವಾಗತ, ಮೆರವಣಿಗೆ; ಫೋಟೋಗಳಲ್ಲಿ ನೋಡಿ

Edited By: ವಿವೇಕ ಬಿರಾದಾರ

Updated on: Sep 06, 2023 | 9:16 AM

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಇಂದು ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು. ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

1 / 9
ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.05) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು.

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.05) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು.

2 / 9

ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

3 / 9

ಮಂಗಳವಾರ ಮಧ್ಯಾಹ್ನ 12.01ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದವು. ನಂತರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು.

4 / 9

ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಎಸ್​ಪಿ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಜಾನ್ಹವಿ, ಡಿಸಿಎಫ್ ಸೌರಭ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕರಾದ ಶ್ರೀವತ್ಸ ಹರೀಶ್ ಗೌಡ, ಎಂಎಲ್‌ಸಿ ಸಿ.ಎನ್ ಮಂಜೇಗೌಡ ಮೇಯರ್ ಶಿವಕುಮಾರ್, ಅರಮನೆ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಭಾಗಿಯಾಗಿದ್ದರು.

5 / 9

ಗಜಪಡೆಯನ್ನು 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಂಡವು.

6 / 9

ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಯಿತು. ಈ ವೇಳೆ ಆನೆಗಳ ಎದರು ವಿವಿಧ ವಾದ್ಯಗಳನ್ನು ಬಾರಿಸಲಾಯಿತು.

7 / 9

ಈ ಬಾರಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 14 ಆನೆಗಳು ಭಾಗಿಯಾಗಲಿವೆ. ಕ್ಯಾಪ್ಟನ್​​ ಅಭಿಮನ್ಯು ಈ ಬಾರಿಯೂ ಅಂಬಾರಿಯನ್ನು ಹೊರಲಿದ್ದಾನೆ.

8 / 9

ದಸರಾದಲ್ಲಿ ಭಾಗಿಯಾಗುವ ಆನೆಗಳು

9 / 9

ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಗೆ ಮಿಸ್ ಆಗಲಿವೆ.

Published On - 12:58 pm, Tue, 5 September 23

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us