AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಆನೆಗಳ ತೂಕ ಮಾಪನ, ಅಭಿಮನ್ಯು 5 ಸಾವಿರ ತೂಕ, ಏಕಲವ್ಯ ಎಷ್ಟು?

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ದತೆ ನಡೆಯುತ್ತಿದೆ. ದಸರಾದ ಕೇಂದ್ರ ಬಿಂದುವಾಗಿರುವ ಆನೆಗಳ ತೂಕ ಮಾಪನ ಶನಿವಾರ ಬೆಳಗ್ಗೆ ದೇವರಾಜ ಮೊಹಲ್ಲಾದಲ್ಲಿರುವ ಸಾಯಿ ತೂಕ ಮಾಪನ ಕೇಂದ್ರದಲ್ಲಿ ನಡೆಯಿತು. ಕ್ಯಾಪ್ಟನ್​ ಅಭಿಮನ್ಯು 5 ಸಾವಿರ ಕೆಜಿ ತೂಕವಿದ್ದಾನೆ. ಫೋಟೋಸ್​ ನೋಡಿ.

ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Aug 24, 2024 | 11:01 AM

Share
Mysore Dasara 2024: Mysore Dasara abhimanyu and other elephants weight check

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ದತೆ ಜೋರಾಗಿಯೇ ನಡೆಯುತ್ತಿದೆ. ದಸರಾದ ಕೇಂದ್ರ ಬಿಂದುವಾಗಿರುವ ಗಜಪಡೆ ಮೈಸೂರಿಗೆ ಬಂದಿದೆ. ಆನೆಗಳು ಈಗಾಗಲೇ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದು, ಮೈಸೂರಿನಲ್ಲಿ ಪರೆಡ್​ ನಡೆಸುತ್ತಿವೆ. ಶನಿವಾರ ಬೆಳಗ್ಗೆ ಆನೆಗಳ ತೂಕ ಮಾಪನ ಮಾಡಲಾಯಿತು.

1 / 7
Mysore Dasara 2024: Mysore Dasara abhimanyu and other elephants weight check

ದೇವರಾಜ ಮೊಹಲ್ಲಾದಲ್ಲಿರುವ ಸಾಯಿ ತೂಕ ಮಾಪನ ಕೇಂದ್ರದಲ್ಲಿ ಇಂದು (ಆಗಸ್ಟ್​ 24) ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ತೂಕ ಮಾಪನ ಮಾಡಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಆನೆಗಳು ಮೈಸೂರಿಗೆ ಕಾಲಿಡುತ್ತಿದ್ದಂತೆ ತೂಕ ಮಾಪನ ಮಾಡಲಾಯಿತು.

2 / 7
Mysore Dasara 2024: Mysore Dasara abhimanyu and other elephants weight check

ಮೈಸೂರು ದಸರಾದ ಗಜಪಡೆಯ ಕ್ಯಾಪ್ಟನ್​​ ಅಭಿಮನ್ಯು. ಈತನ ತೂಕ 5560 ಕೆಜಿ ಇದೆ. ಈತನ ಜೊತೆಗಾರ್ತಿ ವರಲಕ್ಷ್ಮೀಯ ತೂಕ 3495 ಕೆಜಿ ಇದೆ. ಇನ್ನು ಭೀಮ 4925 ಕೆಜಿ ತೂಕ ಇದ್ದಾನೆ. ರೋಹಿತ್ 3625, ಗೋಪಿ 4970, ಕಂಜನ್ 4515, ಧನಂಜಯ 5155 ಕೆಜಿ ತೂಕ ಇದ್ದಾನೆ.

3 / 7
Mysore Dasara 2024: Mysore Dasara abhimanyu and other elephants weight check

ಕಾರ್ಯಾಚರಣೆಯಲ್ಲಿ ವೀರ ಮರಣವನ್ನಪ್ಪಿದ ಅರ್ಜುನನ ಉತ್ತರಾಧಿಕಾರಿ ಎಂದೇ ಖ್ಯಾತಿ ಗಳಿಸಿರುವ ಏಕಲವ್ಯ 4730 ಕೆಜಿ ತೂಕ ಇದ್ದಾನೆ. ಈತನ ಜೊತೆಗಾರ್ತಿ ಲಕ್ಷ್ಮೀ 2480 ಕೆಜಿ ತೂಕ ಇದ್ದಾಳೆ.

4 / 7
Mysore Dasara 2024: Mysore Dasara abhimanyu and other elephants weight check

ಮೈಸೂರು ದಸರಾ ಜಂಬೂ ಸವಾರಿಗೆ ಮೊದಲ ಹಂತದಲ್ಲಿ ಕಾಡಿನಿಂದ ನಾಡಿಗೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಬಂದಿವೆ. ಕ್ಯಾಪ್ಟನ್​ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ, ಲಕ್ಷ್ಮಿ ಆಗಮಿಸಿದ್ದಾರೆ.

5 / 7
Mysore Dasara 2024: Mysore Dasara abhimanyu and other elephants weight check

ಎರಡನೇ ಹಂತದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮಿ, ಹಿರಣ್ಯ ಆನೆಗಳು ಮೈಸೂರಿಗೆ ಬರಲಿವೆ.

6 / 7
Mysore Dasara 2024: Mysore Dasara abhimanyu and other elephants weight check

ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲಾದೇವಿ ಮೀಸಲು ಆನೆಗಳಾಗಿವೆ.

7 / 7

Published On - 10:59 am, Sat, 24 August 24

Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು