ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಜೊತೆಗೆ ಇದೇ ಸಂದರ್ಭದಲ್ಲಿ ಆರು ಕೊರೊನಾ ಯೋಧರನ್ನು ಸನ್ಮಾನಿಸಲಾಯಿತು.
Published On - 11:14 am, Sat, 17 October 20