Mysuru Dasara 2024: ಮೈಸೂರು ದಸರಾ ಗಜಪಯಣಕ್ಕೆ ಚಾಲನೆ, ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ

Edited By:

Updated on: Aug 21, 2024 | 2:25 PM

ಮೈಸೂರು, ಆಗಸ್ಟ್ 21: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಹುಣಸೂರು ತಾಲೂಕಿನ, ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಬುಧವಾರ ಚಾಲನೆ ದೊರೆಯಿತು. ಶುಭಮುಹೂರ್ತದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ನೆರವೇರಿತು. ಬೆಳಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಸಚಿವರಾದ ಮಹದೇವಪ್ಪ, ಈಶ್ವರ ಖಂಡ್ರೆ ಗಜಪಡೆಗೆ ಚಾಲನೆ ನೀಡಿದರು.

1 / 5
ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ, ಕಂಜನ್‌, ರೋಹಿತ್, ಲಕ್ಷ್ಮೀ, ವರಲಕ್ಷ್ಮೀ, ಏಕಲವ್ಯ ಆನೆಗಳು ಆಗಮಿಸಿವೆ.

ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ, ಕಂಜನ್‌, ರೋಹಿತ್, ಲಕ್ಷ್ಮೀ, ವರಲಕ್ಷ್ಮೀ, ಏಕಲವ್ಯ ಆನೆಗಳು ಆಗಮಿಸಿವೆ.

2 / 5

ಸಂಸದ ಸುನಿಲ್‌ ಬೋಸ್, ಶಾಸಕರಾದ ಜಿಡಿ ಹರೀಶ್ ಗೌಡ, ಡಿ.ರವಿಶಂಕರ್, ಅನಿಲ್ ಚಿಕ್ಕಮಾದು, ಎಂಎಲ್​ಸಿ ವಿವೇಕಾನಂದ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಬಿಜೆಪಿ ಸಂಸದ ಯದುವೀರ್ ಒಡೆಯರ್ ಗೈರಾಗಿದ್ದರು.

3 / 5

ಇಂದು, ನಾಳೆ ಅಶೋಕಪುರಂ ಅರಣ್ಯ ಭವನ ಆವರಣದಲ್ಲಿ ಆನೆಗಳು ವಾಸ್ತವ್ಯ ಹೂಡಲಿವೆ. ಶುಕ್ರವಾರ ಗಜಪಡೆ ಮೈಸೂರು ಅರಮನೆ ಆವರಣ ಪ್ರವೇಶಿಸಲಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

4 / 5

ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಗುರುತಿಸಲಾಗಿದೆ. ದಸರಾದಲ್ಲಿ ಪಾಲ್ಗೊಳ್ಳಲು ಒಟ್ಟು ಹದಿನಾಲ್ಕು ಆನೆಗಳು ಮಾತ್ರ ಮೈಸೂರಿಗೆ ಆಗಮಿಸುತ್ತಿವೆ. ಅಗತ್ಯ ಬಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ.

5 / 5

ಈ ಮಧ್ಯೆ, ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

Loading...
Unable to load recommendations.
Follow Us