AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ನೋಡಲು ಹ್ಯಾಂಡಲ್ ಇಲ್ಲದ ಬೈಕ್ ಸವಾರಿ: ಬರೋಬ್ಬರಿ 460 ಕಿ.ಮೀ ರೈಡ್​​ ಮಾಡಿದ ಇಳಕಲ್ ಸಾಹಸಿ

ಇಳಕಲ್ ನಗರದ ವ್ಯಕ್ತಿಯೊಬ್ಬರು ಮೈಸೂರು ದಸರಾ ನೋಡಲು ಹ್ಯಾಂಡಲ್ ಇಲ್ಲದ ಬೈಕ್​​ ಏರಿ ಬಂದಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಕೊಪ್ಪಳದಿಂದ‌ ಮೈಸೂರುವರೆಗೆ ಬರೊಬ್ಬರಿ 460 ಕಿಮೀ ಹ್ಯಾಂಡಲ್ ಇಲ್ಲದ ಬೈಕ್​​ ಸವಾರಿ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಇಲ್ಲಿವೆ ನೋಡಿ ಫೋಟೋಸ್​​.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 21, 2026 | 4:14 PM

Share
ನಾಡಿನೆಲ್ಲೆಡೆ ಇಂದು ವಿಜಯದಶಮಿ ಸಂಭ್ರಮ ಜೋರಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತವೈಭವ ಮರುಕಳಿಸಿದೆ. ಮೈಸೂರು ದಸರಾ ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಆಗಮಿಸಿದ್ದಾರೆ. ಆದರೆ ಇಲ್ಲೊಬ್ಬರು ವ್ಯಕ್ತಿ ದಸರಾ ನೋಡಲು ಹ್ಯಾಂಡಲ್ ಇಲ್ಲದ ಬೈಕ್​​ ಏರಿ ಆಗಮಿಸಿದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ.

1 / 5
ಇಳಕಲ್​ ನಗರದ ವೀರಣ್ಣ ಕುಂದರಗಿಮಠ ಅವರು ಹ್ಯಾಂಡಲ್ ಇಲ್ಲದ ಬೈಕ್ ಏರಿ ಕೊಪ್ಪಳದಿಂದ‌ ಮೈಸೂರಿನವರೆಗೆ ಆಗಮಿಸುವ ಮೂಲಕ ಎಲ್ಲರ ಹುಬ್ಬೆರಿಸುವಂತೆ ಮಾಡಿದ್ದಾರೆ.

2 / 5
ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದು ಸೋಮವಾರ ಬೆಳಿಗ್ಗೆ 7.30ಕ್ಕೆ ಆರಂಭಗೊಂಡ ಬೈಕ್ ಸವಾರಿ,  ಮಂಗಳವಾರ ಬೆಳಿಗ್ಗೆ 7:30ಕ್ಕೆ ಚಾಮುಂಡಿ ಬೆಟ್ಟ ತಲುಪ್ಪಿದ್ದಾರೆ. ಬರೋಬ್ಬರಿ 460 ಕಿಮೀ ಹ್ಯಾಂಡಲ್ ಇಲ್ಲದ ಬೈಕ್​ ಓಡಿಸುವ ಮೂಲಕ​ ವೀರಣ್ಣ ಕುಂದರಗಿಮಠ ದಾಖಲೆ‌ ಬರೆದಿದ್ದಾರೆ.

3 / 5
ಕೊಪ್ಪಳ, ಹೊಸಪೇಟೆ, ಚಿತ್ರದುರ್ಗ, ತುಮಕೂರು, ಶ್ರೀರಂಗಪಟ್ಟಣ, ಮೈಸೂರು ಅರಮನೆ ಮಾರ್ಗವಾಗಿ ಚಾಮುಂಡಿ ಬೆಟ್ಟ ತಲುಪಿದ್ದಾರೆ. ಬಳಿಕ ಚಾಮುಂಡಿ ದರ್ಶನ ಪಡೆದು, ನಂತರ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು ಬಂದಿದ್ದಾರೆ.

4 / 5
ಇನ್ನು ವೀರಣ್ಣ ಅವರು ಈಗಾಗಲೇ ಹ್ಯಾಂಡಲ್ ಇಲ್ಲದ ಬೈಕ್ ಚಲಾಯಿಸಿ ಅನೇಕ ದಾಖಲೆ‌ ಮಾಡಿದ್ದಾರೆ. ಕೇವಲ ಬೈಕ್​ ಓಡಿಸುವುದು ಮಾತ್ರವಲ್ಲದೆ ಕನ್ನಡ ಬಗ್ಗೆ, ವ್ಯಸನ ಮುಕ್ತ ಸಮಾಜ ಬಗ್ಗೆ, ಬರಗಾಲ ತಡೆಗಟ್ಟಲು ಸಸಿ ನೆಡುವ ಬಗ್ಗೆಯೂ ವೀರಣ್ಣ ಕುಂದರಗಿಮಠ ಜಾಗೃತಿ ಮೂಡಿಸುತ್ತಿದ್ದಾರೆ.

5 / 5
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ

ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ

ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ

ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ

ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ

ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್

ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ

Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ

ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!

ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ