Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara: ಮೈಸೂರು ದಸರಾ ಜಂಬೂಸವಾರಿ: ಅದ್ಭುತ ಕ್ಷಣ ಕಣ್ತುಂಬಿಕೊಂಡ ಕೋಟ್ಯಂತರ ಜನರು

Jamboo Savari: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಇಂದು ದಸರಾ ಸಂಭ್ರಮ ಮನೆ ಮಾಡಿತ್ತು. ಮುಡಾ ಸಂಕಷ್ಟದ ನಡುವೆಯೇ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಅದ್ಧೂರಿ ಚಾಲನೆ ನೀಡಿದರು. ಜಂಬೂಸವಾರಿಯ ಅದ್ಭುತ ಕ್ಷಣಗಳು ಇಲ್ಲಿವೆ.

ಗಂಗಾಧರ​ ಬ. ಸಾಬೋಜಿ
|

Updated on: Oct 12, 2024 | 7:15 PM

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ಧೂರಿ ಚಾಲನೆ ದೊರೆತಿದೆ. ಐತಿಹಾಸಿಕ ಜಂಬೂಸವಾರಿಗೆ ಮಲ್ಲಿಗೆ ನಗರಿ ಮೈಸೂರು ಸುಂದರವಾಗಿ ಸಜ್ಜಾಗಿತ್ತು. ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಪಡೆ ಚಿನ್ನದ ಅಂಬಾರಿ ಹೊತ್ತು ಸಾಗಿದ್ದಾನೆ. ಈ ಐತಿಹಾಸಿಕ ಕ್ಷಣವನ್ನು ಕ್ಯೋಟ್ಯಾಂತರ ಜನರು ಕಣ್ತುಂಬಿಕೊಂಡಿದ್ದಾರೆ.

1 / 9

ಇಂದು ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿಸಲಾಯಿತು. ಬಳಿಕ
ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಚಾಲನೆ ನೀಡಲಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಸಾಥ್ ನೀಡಿದ್ದಾರೆ.

ಇಂದು ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿಸಲಾಯಿತು. ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಚಾಲನೆ ನೀಡಲಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಸಾಥ್ ನೀಡಿದ್ದಾರೆ.

2 / 9
ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ವೇಳೆ ರಾಜವಂಶಸ್ಥ ಯದುವೀರ ಗೈರಾಗಿದ್ದರು. ಗೈರಾಗುವ ಬಗ್ಗೆ ಟಿವಿ9ಗೆ ಮೊದಲೇ ಯದುವೀರ ಒಡೆಯರ್ ತಿಳಿಸಿದ್ದರು. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಪುಷ್ಪಾರ್ಚನೆ ಮಾಡಲಾಗಿದೆ.

3 / 9
ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ಆಸೀನರಾಗಿದ್ದು ಹೀಗೆ. ಅಭಿಮನ್ಯುವಿನ ಮಾವುತ ವಸಂತ ಮುಖದಲ್ಲಿ ಮಂದಹಾಸ.

4 / 9
750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು 5ನೇ ಬಾರಿಗೆ ಹೊತ್ತ ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯವಾಗಿ ಹೆಜ್ಜೆಹಾಕಿದ್ದಾನೆ. ಈ ವೇಳೆ ಕ್ಯಾಪ್ಟನ್​ ಅಭಿಮನ್ಯುಗೆ ಕುಮ್ಕಿ ಆನೆಗಳಾದ ಹಿರಣ್ಯ ಮತ್ತು ಲಕ್ಷ್ಮೀ ಸಾಥ್​​ ನೀಡಿದ್ದು,​ ಧನಂಜಯ ನಿಶಾನೆ ಆನೆಯಾಗಿದ್ದ. ಒಟ್ಟು 9 ಆನೆಗಳು ದಸರಾ ಮೆರವಣಿಗೆಯಲ್ಲಿ ಸಾಗಿವೆ.

5 / 9
ಅರಮನೆಯಿಂದ ಆರಂಭಗೊಂಡಿದ್ದ ಜಂಬೂಸವಾರಿ ಅರಮನೆ, ಜಯಚಾಮರಾಜ ವೃತ್ತ, ಕೃಷ್ಣರಾಜೇಂದ್ರ ವೃತ್ತ,
ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಆಸ್ಪತ್ರೆ ವೃತ್ತ, ಆರ್​​ಎಂಸಿ ವೃತ್ತ, ಬಂಬೂಬಜಾರ್​ ಮೂಲಕ ಬನ್ನಿಮಂಟಪ ತಲುಪಿತು.

ಅರಮನೆಯಿಂದ ಆರಂಭಗೊಂಡಿದ್ದ ಜಂಬೂಸವಾರಿ ಅರಮನೆ, ಜಯಚಾಮರಾಜ ವೃತ್ತ, ಕೃಷ್ಣರಾಜೇಂದ್ರ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಆಸ್ಪತ್ರೆ ವೃತ್ತ, ಆರ್​​ಎಂಸಿ ವೃತ್ತ, ಬಂಬೂಬಜಾರ್​ ಮೂಲಕ ಬನ್ನಿಮಂಟಪ ತಲುಪಿತು.

6 / 9
ಇನ್ನು 140 ಕ್ಕೂ ಹೆಚ್ಚು ಕಲಾ ತಂಡ ಹಾಗೂ 36 ಜಿಲ್ಲೆಗಳ 51 ಸ್ತಬ್ಧ ಚಿತ್ರಗಳು ಜಂಬೂಸವಾರಿಯಲ್ಲಿ ಭಾಗಿಯಾಗಿದ್ದವು. ಜಂಬೂ ಸವಾರಿ ನೋಡಲು ಬಂದ ಜನರಿಂದ ತಮಟೆ, ಡೋಲು ವಾದ್ಯಕ್ಕೆ ಭರ್ಜರಿ ಡ್ಯಾನ್ಸ್​ ಮಾಡಿದ್ದಾರೆ.

7 / 9
ವಿಶ್ವವಿಖ್ಯಾತ ಜಂಬೂಸವಾರಿಯನ್ನು ಕೋಟ್ಯಂತರ ಭಕ್ತರು ಕಾತರ ಕಾದು ಕಣ್ತಿಂಬಿಕೊಂಡಿದ್ದಾರೆ. ಅಂಬಾರಿಯಲ್ಲಿ ಆಸಿನವಾಗಿದ್ದ ನಾಡ ದೇವತೆ ಚಾಮುಂಡೇಶ್ವರಿಯನ್ನು ಕಂಡು ಭಕ್ತರು ಪುನೀತರಾದರು.

8 / 9
ಇನ್ನು ಜಂಬೂಸವಾರಿ ನಡೆಯುವ ದಾರಿಯುದ್ದಕ್ಕೂ ಮುಂಜಾಗ್ರತ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ​

9 / 9
Follow us
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ

ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ

ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್

ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ

ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್

ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು

ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ

ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ

ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?