- TV9 Kannada Kannada News Photos Nabha Natesh Sharing Bold Photos Fans Asked for New Movie Announcement
‘ಇಸ್ಮಾರ್ಟ್’ ಬ್ಯೂಟಿಯ ಆ ಒಂದು ಘೋಷಣೆಗಾಗಿ ಕಾದು ಕುಳಿತಿದ್ದಾರೆ ಅಭಿಮಾನಿಗಳು..
ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.
Updated on: Jun 29, 2023 | 12:53 PM

‘ಇಸ್ಮಾರ್ಟ್ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್ನಿಂದ ಹಿಂದೆ ಬಂದಿಲ್ಲ.

ನಭಾ ನಟೇಶ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



