- Kannada News Photo gallery Naga Chaitanya And Sobhita Dhulipal wedding Photos Sobhita Dhulipal marriage Photos
ಅದ್ದೂರಿಯಾಗಿ ನೆರವೇರಿತು ನಾಗ ಚೈತನ್ಯ-ಶೋಭಿತಾ ಮದುವೆ; ಇಲ್ಲಿವೆ ಸುಂದರ ಫೋಟೋಸ್
ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.
Updated on: Dec 05, 2024 | 8:57 AM

ನಾಗ ಚೈತನ್ಯ ಹಾಗೂ ಶೋಭಿತಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಈಗ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಈ ವಿವಾಹ ನೆರವೇರಿದೆ. ಈ ಫೋಟೋಗಳು ವೈರಲ್ ಆಗಿವೆ.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ಮದುವೆ ಆಗಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ನಿರ್ಮಾಣದ ಈ ಸ್ಟುಡಿಯೋದಲ್ಲಿ ನಾಗ ಚೈತನ್ಯ ಅವರು ತಾತನಿಗೆ ಗೌರವ ಸಲ್ಲಿಕೆ ಮಾಡಿದರು.

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

ನಾಗ ಚೈತನ್ಯ ಅವರ ವಿವಾಹದಿಂದ ತಂದೆ ಅಕ್ಕಿನೇನಿ ನಾಗಾರ್ಜುನ ಸಖತ್ ಖುಷಿ ಆಗಿದ್ದಾರೆ. ಅವರು ನವ ದಂಪತಿ ಜೊತೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ಶೋಭಿತಾಗೆ ಇದು ಮೊದಲ ವಿವಾಹ. ಮಾಡೆಲ್ ಆಗಿ, ನಟಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಅವರು ಈಗ ಸಿನಿಮಾ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.




