ಮಾಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ; ಗಾಯಾಳುಗಳ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದ್ದು, ಗಾಯಾಳುಗಳು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದರು.

Ganapathi Sharma
|

Updated on:May 24, 2023 | 10:49 PM

Nalin Kumar Kateel visits Puttur private hospital where BJP workers admitted after attack by Congress workers

ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ. ಗಾಯಾಳುಗಳು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದರು.

1 / 6
Nalin Kumar Kateel visits Puttur private hospital where BJP workers admitted after attack by Congress workers

ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಈ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ದಾಳಿಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಜತೆ ಬಂಟ್ವಾಳ ಬಿಜೆಪಿ‌ ಶಾಸಕ ರಾಜೇಶ್ ನಾಯ್ಕ್ ಇದ್ದರು.

2 / 6
Nalin Kumar Kateel visits Puttur private hospital where BJP workers admitted after attack by Congress workers

ಮಾಣಿ ಜಂಕ್ಷನ್​ ಬಳಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಯುವಕರ ಮೇಲೆ ತಂಡವೊಂದು ದಾಳಿ ನಡೆಸಿತ್ತು. ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್​​ಗೆ ಡಿಕ್ಕಿ ಹೊಡೆಸಿ ನಂತರ ಹಲ್ಲೆ ನಡೆಸಿತ್ತು. ಕಾರ್ಯಕರ್ತರಾದ ಮಹೇಂದ್ರ ಹಾಗೂ ಪ್ರಶಾಂತ್ ನಾಯ್ಕ್ ಅವರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯವಾಗಿದೆ. ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 / 6
Nalin Kumar Kateel visits Puttur private hospital where BJP workers admitted after attack by Congress workers

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದೆ.

4 / 6
Nalin Kumar Kateel visits Puttur private hospital where BJP workers admitted after attack by Congress workers

ಬಂಟ್ವಾಳದ ಮಾಣಿಯಲ್ಲಿ ನಡೆದ ದಾಳಿಯ ಬಗ್ಗೆ ದಕ್ಷಿಣಕನ್ನಡ ಎಸ್​​ಪಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು, ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ ಹಲ್ಲೆ ನಡೆಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದರು.

5 / 6
Nalin Kumar Kateel visits Puttur private hospital where BJP workers admitted after attack by Congress workers

ಈ ಮಧ್ಯೆ, 2013-18 ರ ಕರಾಳ ದಿನಗಳು ಕರ್ನಾಟಕಕ್ಕೆ ಮರುಕಳಿಸಿರುವಂತೆ ತೋರುತ್ತಿದೆ. ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ಸಿನ ಗೂಂಡಾಗಳು ತಮ್ಮ ಗೂಂಡಾಗಿರಿಯನ್ನು ಪ್ರಾರಂಭಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಟ್ವೀಟ್ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

6 / 6

Published On - 10:43 pm, Wed, 24 May 23

Follow us
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ