AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್​ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ: ಫೋಟೋಗಳಲ್ಲಿ ನೋಡಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ನವೆಂಬರ್ 25) ಬೆಂಗಳೂರಿನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (HAL)ಗೆ ಭೇಟಿ ನೀಡಿ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ವಿವೇಕ ಬಿರಾದಾರ
|

Updated on:Nov 25, 2023 | 1:45 PM

Share
Narendra Modi Bengaluru Visit: PM Modi visits Bengaluru HAL and fly in tejas fighter craft

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ನವೆಂಬರ್ 25) ಬೆಂಗಳೂರಿನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (HAL)ಗೆ ಭೇಟಿ ನೀಡಿ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

1 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನಿ ಮೋದಿಯವರು ಸುಮಾರು 45 ನಿಮಿಷಗಳ ಕಾಲ ಹಾರಾಟ ನಡೆಸಿದರು.

2 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಪ್ರಧಾನಿ ಮೋದಿಯವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಚಿತ್ರಗಳನ್ನು ಎಕ್ಸ್ (ಟ್ವಿಟರ್​)ನಲ್ಲಿ ಹಂಚಿಕೊಂಡಿದ್ದಾರೆ. "ತೇಜಸ್‌ನಲ್ಲಿನ ವಿಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ನಮ್ಮ ದೇಶದ ಸ್ಥಳೀಯ ಉತ್ಪಾದನಾ ಸಾಮರ್ಥ್ಯಗಳಲ್ಲಿನ ನನ್ನ ವಿಶ್ವಾಸ ದ್ವೀಗುಣಗೊಂಡಿದೆ. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನಗೆ ಹೆಮ್ಮೆ ಅನಿಸುತ್ತಿದೆ" ಎಂದು ಪೋಸ್ಟ್ ಮಾಡಿದ್ದಾರೆ.

3 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಭಾರತೀಯ ವಾಯುಸೇನೆ, ಡಿಆರ್‌ಡಿಒ ಮತ್ತು ಎಚ್‌ಎಎಲ್‌ನ್ನು ಶ್ಲಾಘಿಸಿದ ಅವರು, ಸ್ವಾವಲಂಬನೆ ಕ್ಷೇತ್ರದಲ್ಲಿ ಭಾರತವು ಜಗತ್ತಿನ ಯಾವ ದೇಶಕ್ಕಿಂತ ಕಡಿಮೆಯಿಲ್ಲ ಎಂದು ಹೇಳಿದರು.

4 / 9
Narendra Modi Bengaluru Visit: PM Modi visits Bengaluru HAL and fly in tejas fighter craft

"ನಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ನಾವು ಸ್ವಾವಲಂಬನೆಯ ಕ್ಷೇತ್ರದಲ್ಲಿ ವಿಶ್ವದ ಯಾವ ದೇಶಕ್ಕಿಂತ ಕಡಿಮೆಯಿಲ್ಲ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ. ಭಾರತೀಯ ವಾಯುಪಡೆ, DRDO ಮತ್ತು HAL ಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದರು.

5 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಹಲವಾರು ರಾಷ್ಟ್ರಗಳು ತೇಜಸ್ ಖರೀದಿಸಲು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ. ಇದೇ ವರ್ಷ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ GE ಏರೋಸ್ಪೇಸ್ ಮತ್ತು Mk-II ತೇಜಸ್ ಎಂಜಿನ್​ ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದನ್ನು ಭಾರತದಲ್ಲಿ ಉತ್ಪಾದಿಸಲು ಹಸಿರು ನಿಶಾನೆ ಸಿಕ್ಕಿದೆ.

6 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳಿಗೆ ಪ್ರಧಾನಿ ಮೋದಿ ಒತ್ತು ನೀಡುತ್ತಿದ್ದಾರೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಹೆಚ್​ಎಎಲ್ ಟ್ವೀನ್​ ಸೀಟರ್​ LCA ತೇಜಸ್​ಅನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಿತು.

7 / 9
Narendra Modi Bengaluru Visit: PM Modi visits Bengaluru HAL and fly in tejas fighter craft

18 ಟ್ವೀನ್​ ಸೀಟರ್​ LCA ವಿಮಾನಗಳನ್ನು ಖರೀದಿಸಲು ಭಾರತೀಯ ವಾಯುಪಡೆ ಹೆಚ್​ಎಎಲ್​​ ಜೊತೆ ಒಪ್ಪಂದ ಮಾಡಿಕೊಂಡಿದೆ. ಹೆಚ್​ಎಎಲ್​​ ಮುಂದಿನ ವರ್ಷ ಎಂಟು ಯುದ್ಧ ವಿಮಾನಗಳನ್ನು ವಾಯುಪಡೆಗೆ ನೀಡಲಿದೆ. ಮತ್ತು ಉಳಿದವುಗಳನ್ನು 2026-27ರ ವೇಳೆಗೆ ನೀಡಲಿದೆ.

8 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಕರ್ನಾಟಕ್ಕೆ ಆಗಮಿಸಿದರು.

9 / 9

Published On - 1:41 pm, Sat, 25 November 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ