- Kannada News Photo gallery Narendra Modi in Gorakhpur even heavy rain couldn’t stop people from coming on the roads to welcome PM
PM Modi in Gorakhpur: ಭಾರಿ ಮಳೆಯ ನಡುವೆಯೂ ಗೋರಖ್‌ಪುರದಲ್ಲಿ ಪ್ರಧಾನಿ ಮೋದಿ ಸ್ವಾಗತಕ್ಕೆ ಜನಸಾಗರ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಭೇಟಿ ನೀಡಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ. ಮೋದಿ ಅವರು ಗೋರಖ್‌ಪುರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಭಾರಿ ಮಳೆಯಾಗುತ್ತಿತ್ತು. ರಸ್ತೆ ಬದಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಜನರು ಘೋಷಣೆಗಳನ್ನು ಕೂಗಿ ಪ್ರಧಾನಿಯವರನ್ನು ಸ್ವಾಗತಿಸಿದರು.
Updated on: Jul 07, 2023 | 9:35 PM

ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಗೋರಖ್‌ಪುರಕ್ಕೆ ತಲುಪಿದ ಪ್ರಧಾನಿ ಮೋದಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಭಾರಿ ಮಳೆಯ ಮಧ್ಯೆಯೂ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಅಪಾರ ಸಂಖ್ಯೆಯ ಜನರು ಘೋಷಣೆಗಳನ್ನು ಕೂಗಿ ಮೋದಿ ಅವರನ್ನು ಸ್ವಾಗತಿಸಿದರು.

ವರ್ಷಧಾರೆಯ ಮಧ್ಯೆ ಮೋದಿ ಅವರ ಕಾರು ಸಂಚರಿಸುತ್ತಿದ್ದರೆ ರಸ್ತೆಯ ಬದಿಗಳಲ್ಲಿ ನಿಂತಿದ್ದವರ ಹರ್ಷೋದ್ಘಾರ ಮುಗಿಲುಮುಟ್ಟಿತು. ಮೋದಿ, ಮೋದಿ ಎಂಬ ಘೋಷಣೆಗಳು ಕೇಳಿಬಂದವು.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.

ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಭಾಗವಹಿಸಿದ ಜನಸ್ತೋಮ.

ಜೋಧ್‌ಪುರ-ಸಾಬರಮತಿ ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆ ಕಾರ್ಯಕ್ರಮಕ್ಕೂ ಮುನ್ನ ರೈಲಿನ ಬಳಿ ಪೊಲೀಸ್ ಹಾಗೂ ಇತರ ಸಿಬ್ಬಂದಿ.

ವಂದೇ ಭಾರತ್ ರೈಲಿಗೆ ಚಾಲನೆ ನೀಡುವುದರ ಜತೆಗೆ, ಗೋರಖ್‌ಪುರ ರೈಲು ನಿಲ್ದಾಣವನ್ನು ವಿಶ್ವದರ್ಜೆಯ ರೈಲು ನಿಲ್ದಾಣವನ್ನಾಗಿ ಪುನರಾಭಿವೃದ್ಧಿಗೊಳಿಸುವ ಕಾಮಗಾರಿಗೆ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು.



















