
ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.