ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ರೈತರ ದಿನದಂದು ಕರ್ನಾಟಕದ ಅನ್ನದಾತನಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೃಷಿಭಾಗ್ಯ ಯೋಜನೆ ಮರುಜಾರಿ ಸೇರಿದಂತೆ ರೈತರಿಗಾಗಿ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಕರ್ನಾಟಕದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಮರುಜಾರಿ ಮಳೆ ಕೊರತೆಯಾದರೂ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು. ಈ ನಿಟ್ಟಿನಲ್ಲಿ 100 ಕೋಟಿ ವೆಚ್ಚದಲ್ಲಿ ಕೃಷಿಭಾಗ್ಯ ಯೋಜನೆ ಮರುಜಾರಿಗೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ ರೂ. 2,000 ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ.
ಒಂದೂವರೆ ದಶಕಕ್ಕಿಂತ ಹೆಚ್ಚು ಕಾಲ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಯನ್ನು ಸಕ್ರಮಗೊಳಿಸಿ, ಭೂಒಡೆತನದ ಹಕ್ಕನ್ನು ರೈತರಿಗೆ ನೀಡಲಾಗುವುದು. ಪ್ರತಿಯೊಬ್ಬ ರೈತನು ಸ್ವಂತ ಭೂಮಿಯಲ್ಲಿ ಶ್ರಮದ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದಿದ್ದಾರೆ.
ಅಕ್ರಮ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಲು ಸರ್ಕಾರ ತೀರ್ಮಾನಿಸಿದೆ. 4 ಲಕ್ಷ ಪಂಪ್‌ಸೆಟ್ ಸಕ್ರಮಗೊಳಿಸಿ ಮೂಲಸೌಕರ್ಯ ನೀಡಲಾಗುತ್ತೆ ಎಂದು ತಿಳಿಸಿದ್ದಾರೆ.
ಕೃಷಿ ಚಟುವಟಿಕೆಗಳಿಗೆ ಆಧುನಿಕತೆಯ ಸ್ಪರ್ಶ ನೀಡಿ ಬಂಡವಾಳ ವೆಚ್ಚವನ್ನು ತಗ್ಗಿಸುವ ಹಾಗೂ ಅಧಿಕ ಇಳುವರಿ ರೈತರ ಕೈಸೇರುವಂತೆ ಮಾಡುವ ಸಲುವಾಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ರೂ.100 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬರದ ಸಂಕಷ್ಟದ ನಡುವೆಯೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವ ಮೂಲಕ ನಮ್ಮ ಸರ್ಕಾರವು ನಾಡಿನ ರೈತರ ಹಿತ ಕಾಪಾಡಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ