ಹುಬ್ಬಳ್ಳಿಯಲ್ಲಿಂದು (ಜ. 12) ಎಲ್ಲಿ ನೋಡಿದರಲ್ಲಿ ಜನ. ಅದರಲ್ಲಿಯೂ ಯುವಕರು. 26ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಅವಳಿ ನಗರಗಳು ಇಂದು ಸಾಕ್ಷಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಇದು ಯುವಸಮೂಹಕ್ಕೆ ಮತ್ತಷ್ಟು ಹುಮ್ಮಸ್ಸು ನೀಡಿದೆ.
ರಾಷ್ಟ್ರೀಯ ಯುವ ಜನೋತ್ಸವಕ್ಕೆ ರಾಜ್ಯದ ಬೇರೆ ಬೇರೆ ಕಡೆಗಳಿಂದ ವಿದ್ಯಾರ್ಥಿ/ನಿಗಳು ಆಗಮಿಸಿದ್ದು, ಇದರಿಂದ ಯುವ ಜನೋತ್ಸವದ ರಂಗು ಮತ್ತಷ್ಟು ಹೆಚ್ಚಾಗಿದೆ.
ವಿಶೇಷ ವೇಷ ಭೂಷಣದಲ್ಲಿ ಯುವತಿಯರು ಕಂಡದ್ದು ಹೀಗೆ.
ಧಾರವಾಡದ ಕೆಸಿಡಿ ಮೈದಾನದಲ್ಲಿ ಆಯೋಜಿಸಿದ್ದ ಸಾಂಸ್ಕ್ರತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಿದರು.
ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ್ದ ಕಲಾ ತಂಡಗಳು ಯುವ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶಿಸಿದರು.
ಇನ್ನು ರಾಷ್ಟ್ರೀಯ ಯುವ ಜನೋತ್ಸವ ಕಣ್ತುಂಬಿಕೊಳ್ಳಲು ಕಿಕ್ಕಿರಿದ ಜನಸಾಗರ.
Published On - 10:48 pm, Thu, 12 January 23