Updated on: Aug 19, 2022 | 4:51 PM
ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇತ್ತೀಚೆಗೆ ವಿವಾಹವಾದರು. ಸದ್ಯ ಈ ಜೋಡಿ ವಿದೇಶದಲ್ಲಿ ಸುತ್ತಾಟ ನಡೆಸುತ್ತಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.
ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ನಯನತಾರಾ ಅವರು ಇನ್ಸ್ಟಾಗ್ರಾಮ್ ಖಾತೆ ಹೊಂದಿಲ್ಲ.
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹ ನಡೆಯಿತು.
ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ.