- Kannada News Photo gallery Nayanthara and Vignesh Shivan visits Kukke Subrahmanya Temple here is the pics
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ನಟಿ ನಯನತಾರಾ ದಂಪತಿ
Kukke Subrahmanya: ದಕ್ಷಿಣ ಭಾರತದಲ್ಲಿ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತವಾಗಿರುವ ನಟಿ ನಯನತಾರಾ ಅವರು ಇಂದು ಪತಿ, ನಿರ್ದೇಶಕ ವಿಘ್ನೇಷ್ ಶಿವನ್ ಅವರೊಟ್ಟಿಗೆ ಕರ್ನಾಟಕದ ಖ್ಯಾತ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು. ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರ್ಪ ಸಂಸ್ಕಾರ ಪೂಜೆಯನ್ನು ನೆರವೇರಿಸಿದರು. ಈ ವೇಳೆ ದೇವಾಲಯದ ಪ್ರಮುಖ ಅರ್ಚಕರುಗಳು ಪೂಜೆಯನ್ನು ನೆರವೇರಿಸಿಕೊಟ್ಟರು.
Updated on:Nov 13, 2025 | 11:20 AM

ದಕ್ಷಿಣ ಭಾರತದಲ್ಲಿ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತವಾಗಿರುವ ನಟಿ ನಯನತಾರಾ ಅವರು ಇಂದು ಪತಿ, ನಿರ್ದೇಶಕ ವಿಘ್ನೇಷ್ ಶಿವನ್ ಅವರೊಟ್ಟಿಗೆ ಕರ್ನಾಟಕದ ಖ್ಯಾತ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರ್ಪ ಸಂಸ್ಕಾರ ಪೂಜೆಯನ್ನು ನೆರವೇರಿಸಿದರು. ಈ ವೇಳೆ ದೇವಾಲಯದ ಪ್ರಮುಖ ಅರ್ಚಕರುಗಳು ಪೂಜೆಯನ್ನು ನೆರವೇರಿಸಿಕೊಟ್ಟರು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿಗೆ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಸನ್ಮಾನ ಮಾಡಿದರು. ನಟಿಯೊಂದಿಗೆ ಕೆಲವರು ಫೋಟೊ ಸಹ ಕ್ಲಿಕ್ಕಿಸಿಕೊಂಡರು.

ಇತ್ತೀಚೆಗೆ ಹಲವಾರು ಪರಭಾಷೆ ನಟ-ನಟಿಯರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಕತ್ರಿನಾ ಕೈಫ್, ಶಿಲ್ಪಾ ಶೆಟ್ಟಿ ಇನ್ನೂ ಹಲವಾರು ಸೆಲೆಬ್ರಿಟಿಗಳು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸ್ಥೀತವಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ, ಭಾರತದ ಹೆಸರಾಂತ ನಾಗಕ್ಷೇತ್ರವಾಗಿದೆ. ಹಲವಾರು ಸಿನಿಮಾ ಸೆಲೆಬ್ರಿಟಿಗಳು, ಕ್ರಿಕೆಟಿಗರು, ರಾಜಕಾರಣಿಗಳು ಭೇಟಿ ನೀಡಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದರು.
Published On - 10:54 am, Thu, 13 November 25




