- Kannada News Photo gallery Neeraj Chopra wins gold with massive 88.67m throw in Doha Diamond League Kannada News
Neeraj Chopra: ದೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾಗೆ ಚಿನ್ನ: ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಗೋಲ್ಡನ್ ಬಾಯ್
Doha Diamond League 2023: ಶುಕ್ರವಾರ ದೋಹಾದ ಕತಾರ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಮೊದಲ ಪ್ರಯತ್ನದಲ್ಲೇ ನೀರಜ್ ಚೋಪ್ರಾ ಅವರು 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.
Updated on: May 06, 2023 | 11:29 AM

ಒಲಿಂಪಿಕ್ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಚಾಂಪಿಯನ್ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ದೋಹಾ ಡೈಮಂಡ್ ಲೀಗ್‌ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ಸ್‌ಗೆ ಟಿಕೆಟ್ ಪಡೆದುಕೊಂಡಿದ್ದಾರೆ.

ಕಳೆದ ವರ್ಷ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ಟ್ರೋಫಿಯನ್ನು ಜೇಬಿಗಿಳಿಸಿದ್ದ 25 ವರ್ಷದ ಚೋಪ್ರಾ, ಈ ಬಾರಿ ಕೂಡ ಅತ್ಯುತ್ತಮ ಥ್ರೋ ಮಾಡಿದ ಆಟಗಾರರಾಗಿ ಹೊರ ಹೊಮ್ಮಿದ್ದಾರೆ.

ಶುಕ್ರವಾರ ದೋಹಾದ ಕತಾರ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಮೊದಲ ಪ್ರಯತ್ನದಲ್ಲೇ ನೀರಜ್ ಅವರು 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ನೀರಜ್ ಅವರ ಥ್ರೋ ಈ ಸ್ಪರ್ಧೆಯ ಅತ್ಯುತ್ತಮ ದಾಖಲೆಯಾಗಿ ಹೊರಹೊಮ್ಮಿತು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ಜೆಕ್ ಆಟಗಾರ ಜಾಕುಬ್ ವಡ್ಲೆಜ್ ಎರಡನೇ ಸ್ಥಾನ ಹಾಗೂ ಗ್ರೆನಡಾದ ಆ್ಯಂಡರ್ಸನ್ ಪೀಟರ್ಸ್ ಮೂರನೇ ಸ್ಥಾನ ಬಾಚಿಕೊಂಡರು.

ಈ ಮೂಲಕ ನೀರಜ್ ಮುಂದಿನ ವರ್ಷ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ನೇರವಾಗಿ ಅರ್ಹತೆ ಪಡೆದುಕೊಂಡಿದ್ದಾರೆ. ಜಾವೆಲಿನ್ ಸ್ಪರ್ಧೆಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತಾ ಮಾನದಂಡವು 85.50 ಮೀಟರ್ ಆಗಿದೆ. ದೋಹಾ ಡೈಮಂಡ್ ಲೀಗ್‌ನಲ್ಲಿ ಇವರು ಮೊದಲ ಪ್ರಯತ್ನದಲ್ಲೇ 88.67 ಮೀಟರ್ ದೂರ ಎಸೆದು ದಾಖಲೆ ಬರೆದರು.

ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ದೋಹಾ ಡೈಮಂಡ್ ಲೀಗ್‌ನಲ್ಲಿ 88.67 ಮೀಟರ್‌ಗಳನ್ನು ಎಸೆದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ. ನಮ್ಮ ದೇಶಕ್ಕೆ ನೀರಜ್ ಕೀರ್ತಿ ತಂದರು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.




