Updated on: May 02, 2023 | 1:31 PM
ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್’ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಮತ್ತು ಶ್ರದ್ಧಾ ಕಪೂರ್ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್ ಕಾತರರಾಗಿದ್ದಾರೆ.
ಬಾಕ್ಸ್ ಆಫೀಸ್ನಲ್ಲೂ ‘ತು ಜೂಟಿ ಮೈ ಮಕ್ಕಾರ್’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.
ಈಗ ನೆಟ್ಫ್ಲಿಕ್ಸ್ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.
‘ತು ಜೂಟಿ ಮೈ ಮಕ್ಕಾರ್’ ಚಿತ್ರಕ್ಕೆ ಲವ್ ರಂಜನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್ ಕಪೂರ್ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.