- TV9 Kannada Kannada News Photos New Kannada movie Love Case muhurtha at Bande Mahakali Temple Bengaluru
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ‘ಲವ್ ಕೇಸ್’ ಸಿನಿಮಾ ಮುಹೂರ್ತ
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ‘ಲವ್ ಕೇಸ್’ ಸಿನಿಮಾದ ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ. ಸುಧಾರಾಣಿ, ಶ್ರೀನಗರ ಕಿಟ್ಟಿ, ನಾಗಭೂಷಣ್, ಪ್ರಮೋದ್ ಶೆಟ್ಟಿ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದರು. ‘ಮಹಾನಟಿ’ ಖ್ಯಾತಿಯ ವಂಶಿ, ‘ಸಹಿಪ್ರಾ ಶಾಲೆ’ ಸಿನಿಮಾ ಖ್ಯಾತಿಯ ರಂಜನ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.
Updated on: Nov 07, 2025 | 6:58 PM

ಮೋಹನ್ ಬಾಬು ಅವರು ‘ಎಂ.ಬಿ. ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ‘ಲವ್ ಕೇಸ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೈಶ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಇಂದು (ನ.7) ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.

ಸುಧಾರಾಣಿ, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ನಾಗಭೂಷಣ, ಪ್ರಮೋದ್ ಶೆಟ್ಟಿ, ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ವಂಶಿ, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ರಂಜನ್ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ಲವ್ ಕೇಸ್’ ಸಿನಿಮಾದ ಶೀರ್ಷಿಕೆಗೆ ‘ಪ್ಯೂರ್ ಲವ್ ಸ್ಟೋರಿ’ ಎಂಬ ಅಡಿ ಬರಹವಿದೆ. ವಿ. ಹರಿಕೃಷ್ಣ ಅವರ ಪುತ್ರ ಆದಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಮಾಸ್ತಿ ಅವರ ಸಂಭಾಷಣೆ, ಅನುಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

‘ಲವ್ ಕೇಸ್’ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಶೀರ್ಷಿಕೆಯನ್ನ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ಅವರು ಅನಾವರಣ ಮಾಡಿದರು.

ವೇದಿಕೆಯಲ್ಲಿ ಹಿರಿಯ ನಟಿ ಸುಧಾರಾಣಿ , ಶ್ರೀನಗರ ಕಿಟ್ಟಿ, ನಾಗಭೂಷಣ, ಮಾಸ್ತಿ, ನಿರ್ದೇಶಕ ಜೈಶ್ ಅವರು ಮಾತಾಡಿದರು. 6 ತಿಂಗಳುಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



