Updated on: Sep 13, 2021 | 4:21 PM
ರೇವತಿ ಅವರು ಈಗ 8 ತಿಂಗಳ ತುಂಬು ಗರ್ಭಿಣಿ. ಆ ಪ್ರಯುಕ್ತ ಸೀಮಂತ ಕಾರ್ಯಕ್ರಮ ನೆರವೇರಿಸಲಾಗುತ್ತಿದೆ. ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
ಎಚ್ಎಸ್ಆರ್ ಲೇಔಟ್ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್ನಲ್ಲಿ ನಿಖಿಲ್ ಪತ್ನಿ ರೇವತಿಗೆ ಸೀಮಂತ ಕಾರ್ಯಕ್ರಮ ಮಾಡಲಾಗುತ್ತಿದೆ. ಇಂದು (ಸೆ.13) ಈ ಕಾರ್ಯ ನಡೆಯುತ್ತಿದ್ದು, ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.
ಕೊವಿಡ್ ನಿಯಮಾವಳಿ ಹಿನ್ನೆಲೆಯಲ್ಲಿ ಹೆಚ್ಚಿನವರನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಕುಟುಂಬದ ಆಪ್ತರು ಈ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.
ರೇವತಿ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್ ಹೇಳಿದ್ದರು.
ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ನಿಖಿಲ್ ಮತ್ತು ರೇವತಿ ದಂಪತಿಗೆ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ