- Kannada News Photo gallery Nikki Galrani Engagement Sanjjanaa Galrani Sister Engagement with Aadhi Pinisetty
ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ
ನಿಕ್ಕಿ ಮತ್ತು ಆದಿ ಈ ಮೊದಲಿನಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಈಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ತಮ್ಮ ಪ್ರೀತಿ ವಿಚಾರವನ್ನು ಬಹಿರಂಗ ಮಾಡಿದ್ದಾರೆ.
Updated on: Mar 26, 2022 | 7:29 PM

ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ಕನ್ನಡ, ತಮಿಳು, ಮಲಯಾಳಂ ಭಾಷೆಯ ಸಿನಿಮಾ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಿಕ್ಕಿ ನಟಿಸಿದ್ದಾರೆ. ಪರಭಾಷೆಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ. ಅವರು ಈಗ ಸುದ್ದಿಯಲ್ಲಿದ್ದಾರೆ.

ಸದ್ದಿಲ್ಲದೆ, ನಿಕ್ಕಿ ಅವರ ನಿಶ್ವಿತಾರ್ಥ ನೆರವೇರಿದೆ. ಖ್ಯಾತ ನಟ ಆದಿ ಪಿನಿಸೆಟ್ಟಿ ಜೊತೆಗೆ ಹೊಸ ಬಾಳು ಆರಂಭಿಸಲು ನಿಕ್ಕಿ ಸಿದ್ಧರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರ ಅಧಿಕೃತ ಮಾಡಿದ್ದಾರೆ.

ನಿಕ್ಕಿ ಮತ್ತು ಆದಿ ಈ ಮೊದಲಿನಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಈಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ತಮ್ಮ ಪ್ರೀತಿ ವಿಚಾರವನ್ನು ಬಹಿರಂಗ ಮಾಡಿದ್ದಾರೆ.

‘1983’ ಹೆಸರಿನ ಮಲಯಾಳಂ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ನಿಕ್ಕಿ. ಕನ್ನಡದ ಕೆಲ ಚಿತ್ರಗಳಲ್ಲೂ ಅವರು ನಟಿಸಿದ್ದಾರೆ. ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ ನಿಕ್ಕಿ.

ಆದಿ ಅವರು ಟಾಲಿವುಡ್ ಹಾಗೂ ತಮಿಳು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ.

ನಿಕ್ಕಿ ಅವರ ನಿಶ್ವಿತಾರ್ಥ ನೆರವೇರಿದೆ. ಖ್ಯಾತ ನಟ ಆದಿ ಪಿನಿಸೆಟ್ಟಿ ಜೊತೆಗೆ ಹೊಸ ಬಾಳು ಆರಂಭಿಸಲು ನಿಕ್ಕಿ ಸಿದ್ಧರಾಗಿದ್ದಾರೆ.



















