Kannada News Photo gallery no assets 7 Cases On Sri Ram Sena chief Pramod Muthalik Who filed nomination from Karkala constituency
ಪ್ರಮೋದ್ ಮತಾಲಿಕ್ ನಾಮಪತ್ರ ಸಲ್ಲಿಕೆ: ಆಸ್ತಿಯೇ ಇಲ್ಲ, ಪೊಲೀಸ್ ಕೇಸ್‌ಗಳೇ ಜಾಸ್ತಿ!
ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಉಡುಪಿ ಜಿಲ್ಲೆಯ ಕಾರ್ಕಳದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ನಾಮಪತ್ರದಲ್ಲಿ ಆಸ್ತಿ ವಿವರದ ಬಗ್ಗೆ ಅಫಿಡೆವಿಟ್ ಸಲ್ಲಿಸಿದ್ದು, ಇದರಲ್ಲಿ ಅವರ ಬಳಿ ಯಾವುದೇ ಸ್ಥಿರಾಸ್ತಿ, ಚರಾಸ್ತಿ, ವಾಹನಗಳಿಲ್ಲ. ಆದರೆ ರಾಜ್ಯದ 7 ವಿವಿಧ ಪೊಲೀಸ್ ಠಾಣೆಗಳಲ್ಲಿ ಸೌಹಾರ್ಧಕ್ಕೆ ಧಕ್ಕೆ ತಂದಿರುವ ಆರೋಪಗಳ ಪ್ರಕರಣಗಳಿವೆ. ಎಲ್ಲೆಲ್ಲಿ ಕೇಸ್? ಇವರ ಆದಾಯವೇನು? ಇವರ ಉದ್ಯೋಗವೇನು? ಎಲ್ಲಾ ಮಾಹಿತಿ ಈ ಕೆಳಗಿನಂತಿದೆ.
1 / 9
ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡಕ್ಕಿಳಿದಿದ್ದು, ಉಡುಪಿ ಜಿಲ್ಲೆಯ ಕಾರ್ಕಳದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
2 / 9
ಇನ್ನು ನಾಮಪತ್ರದಲ್ಲಿ ಆಸ್ತಿ ವಿವರದ ಬಗ್ಗೆ ಅಫಿಡೆವಿಟ್ ಸಲ್ಲಿಸಿದ್ದು, ಇದರಲ್ಲಿ ಅವರ ಬಳಿ ಯಾವುದೇ ಸ್ಥಿರಾಸ್ತಿ, ಚರಾಸ್ತಿ, ವಾಹನಗಳಿಲ್ಲ. ಆದರೆ ರಾಜ್ಯದ 7 ವಿವಿಧ ಪೊಲೀಸ್ ಠಾಣೆಗಳಲ್ಲಿ ಸೌಹಾರ್ಧಕ್ಕೆ ಧಕ್ಕೆ ತಂದಿರುವ ಆರೋಪಗಳ ಪ್ರಕರಣಗಳಿವೆ.
3 / 9
ಕೈಯಲ್ಲಿ 10,500 ರೂ. ನಗದು ಮತ್ತು ಬ್ಯಾಂಕುಗಳಲ್ಲಿ 2,63,500 ರೂ. ಠೇವಣಿ ಹಣವಿದೆ. ಇದನ್ನು ಬಿಟ್ಟರೆ ಬೇರೆ ಯಾವುದೇ ಚರಾಸ್ತಿ ಅಥವಾ ಸ್ಥಿರಾಸ್ತಿ, ಸ್ವಂತ ವಾಹನ ಅಥವಾ ಸಾಲ ಇಲ್ಲವೆಂದು ಘೋಷಣೆ ಮಾಡಿದ್ದಾರೆ.
4 / 9
ಅವರ ಮೇಲೆ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಮುಖವಾಗಿ ಸೌಹಾರ್ದಕ್ಕೆ ಧಕ್ಕೆ ಉಂಟುಮಾಡಿದ ಒಟ್ಟು 7 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ.
5 / 9
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋಮು ಗಲಭೆ, ಜೀವ ಬೆದರಿಕೆ, ಪ್ರಚೋದನಕಾರಿ ಹೇಳಿಕೆ, ಮತೀಯ ಭಾವನೆಗೆ ಧಕ್ಕೆ, ಅವಹೇಳನ, ಆದೇಶ ಉಲ್ಲಂಘನೆ, ದಾರ್ಮಿಕ ಭಾವನೆಗೆ ಧಕ್ಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಒಟ್ಟು 7 ಪ್ರಕರಣಗಳು ಪ್ರಮೋದ್ ಮುತಾಲಿಕ್ ಮೇಲಿವೆ.
6 / 9
ಯಾದಗಿರಿ ಠಾಣೆ (ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ ಉಲ್ಲಂಘನೆ), ಶೃಂಗೇರಿ ಠಾಣೆ (ಮಾನನಷ್ಟ ಮೊಕದ್ದಮೆ), ಬೆಂಗಳೂರು ಹೈಗ್ರೌಂಡ್ಸ್ ಠಾಣೆ (ಪ್ರಚೋದನಾಕಾರಿ ಭಾಷಣ, ಜೀವ ಬೆದರಿಕೆ, ಧರ್ಮಗಳ ನಡುವೆ ದ್ವೇಷ ಭಾವನೆ, ಧಾರ್ಮಿಕ ಭಾವನೆಗೆ ಧಕ್ಕೆ), ಬಬಲೇಶ್ವರ ಠಾಣೆ (ದಾರ್ಮಿಕ ಭಾವನೆಗೆ ಧಕ್ಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ), ಬಾಗಲಕೋಟೆಯ ನವಸಾಗರ ಠಾಣೆ (ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಪ್ರಚೋದನೆ, ಕೋಮು ಗಲಭೆ, ಜೀವ ಬೆದರಿಕೆ), ಜೇವರ್ಗಿ ಠಾಣೆ (ಧಾರ್ಮಿಕ ಭಾವನೆಗೆ ಧಕ್ಕೆ, ಪ್ರಚೋದನೆ, ಕೋಮು ಗಲಭೆ, ಜೀವ ಬೆದರಿಕೆ), ಮುರುಡೇಶ್ವರ ಠಾಣೆ (ಮತೀಯ ಭಾವನೆಗೆ ಧಕ್ಕೆ, ಪ್ರಚೋದನಕಾರಿ ಹೇಳಿಕೆ, ಅವಹೇಳನ, ಆದೇಶ ಉಲ್ಲಂಘನೆ) ಸೇರಿ ಒಟ್ಟು 7 ಪ್ರಕರಣಗಳು ಪ್ರಮೋದ್ ಮುತಾಲಿಕ್ ಮೇಲಿವೆ.
7 / 9
ಪ್ರಮೋದ್ ಮುತಾಲಿಕ್ ಅವರಿಗೆ ಪತ್ನಿ, ಕುಟುಂಬ ಇಲ್ಲ. ಯಾರೂ ಅವಲಂಬಿತರೂ ಇಲ್ಲ. ಉಳಿದಂತೆ ಅವರ ಹೆಸರಲ್ಲಿ ಯಾವುದೇ ಜಮೀನು, ನಿವೇಶನ, ಮನೆ, ವಾಹನ, ಚಿನ್ನಭರಣ, ಸಾಲ, ದುಬಾರಿ ವಸ್ತುಗಳು ಇಲ್ಲ.
8 / 9
ಆದಾಯ ಮೂಲವನ್ನು ದೇಣಿಗೆ ಸಂಗ್ರಹ, ಉದ್ಯೋಗ ಸಮಾಜಸೇವೆ ಎಂದು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ತಿಳಿಸಿದ್ದಾರೆ.
9 / 9
ಕಾರ್ಕಳ ವಿಧಾನಸಭಾ ಕ್ಷೇತ್ರವು ಬಿಜೆಪಿ ಭದ್ರಕೋಟೆ. ಸಚಿವ ಸುನೀಲ್ ಕುಮಾರ್ ಆಯ್ಕೆಯಾಗುತ್ತಿರುವ ಕ್ಷೇತ್ರವಾಗಿದೆ. ಇದೀಗ ಪ್ರಮೋದ್ ಮುತಾಲಿಕ್ ಸಹ ಕಣಕ್ಕಿಳಿದಿದ್ದಾರೆ. ಈ ಹಿಂದೆ ಪ್ರಮೋದ್ ಮುತಾಲಿಕ್ ಹಾಗೂ ಸುನಿಲ್ ಕುಮಾರ್ ಗುರುಶಿಷ್ಯರಂತೆ ಒಡನಾಟ ಹೊಂದಿದ್ದರು. ಆದರೆ, ಈ ಬಾರಿ ಗುರು ಶಿಷ್ಯರ ಮಧ್ಯೆ ಪೈಪೋಟಿ ನಡೆಯಲಿದೆ.
Published On - 7:21 am, Wed, 19 April 23