Updated on: Oct 31, 2022 | 9:09 PM
ದೇಶದ ಬೆಳವಣಿಗೆಯಲ್ಲಿ ಈಶಾನ್ಯ ರಾಜ್ಯಗಳು ತಮ್ಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶ ಉದ್ದೇಶಿಸಿ ಸಚಿವರು ಮಾತನಾಡಿದರು.
ಇತಿಹಾಸದಲ್ಲೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳ ಗಣಿಗಾರಿಕೆಯಲ್ಲಿ ಹೊಸ ಸಾಧ್ಯತೆಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೆರೆದಿಟ್ಟಿದ್ದಾರೆ.
ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶಕ್ಕೆ ಪ್ರಲ್ಹಾದ್ ಜೋಶಿ ಅವರನ್ನ ನಾಗಾಲ್ಯಾಂಡ್ ಮತ್ತು ಅಸ್ಸಾಂ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು.
ವಿಶೇಷ ಅಭಿಯಾನ 2.0 ಅಡಿಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸ್ವತಃ ಸಸಿಗಳನ್ನು ನೆಟ್ಟು ನೀರೆದರು.
ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿರುವ ಜಿಎಸ್‌ಐ ಕಚೇರಿಗೆ ಭೇಟಿ ನೀಡಿದ ಅವರು, ಆ ಭಾಗದ ಪರಿಶೋಧನಾ ಚಟುವಟಿಕೆಗಳಿಗೆ ಕುರಿತಂತೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದರು.
ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ದಾರ್ಶನಿಕರಾಗಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು.
ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶದ ಮೂಲಕ ಈಶಾನ್ಯ ಭಾಗದ ಆರ್ಥಿಕಾಭಿವೃದ್ಧಿ ದೃಷ್ಟಿಯಿಂದ ಮಹತ್ತರ ಹೆಜ್ಜೆಗೆ ಪ್ರಲ್ಹಾದ ಜೋಶಿಯವರು ಮುಂದಡಿ ಇಟ್ಟಿದ್ದಾರೆ.
ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಂಡದ್ದು ಹೀಗೆ.