Janhvi Kapoor: ಜಾನ್ವಿ ಕಪೂರ್​ ಫೋಟೋ ಕಂಡು ಕಣ್ಣರಳಿಸಿದ ಪಡ್ಡೆಗಳು; ಶ್ರೀದೇವಿ ಪುತ್ರಿಯ ಗ್ಲಾಮರಸ್​ ಗೆಟಪ್​

Updated on: Apr 09, 2023 | 11:23 AM

Janhvi Kapoor New Photos: ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರ ರೆಡ್​ ಕಾರ್ಪೆಟ್​ ಮೇಲೆ ಜಾನ್ವಿ ಕಪೂರ್​ ಹೆಜ್ಜೆ ಹಾಕಿದ್ದಾರೆ. ಅವರ ಫೋಟೋಗಳು ಆಕರ್ಷಕವಾಗಿವೆ.

1 / 5
ಶ್ರೀದೇವಿ ಮಗಳು ಜಾನ್ವಿ ಕಪೂ​ರ್​ ಅವರು ಹಿಂದಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಆಗಾಗ ಹೊಸ ಫೋಟೋಶೂಟ್​ ಮಾಡಿಸುವ ಅವರು ಪಡ್ಡೆಗಳ ಕಣ್ಣು ಕುಕ್ಕುತ್ತಾರೆ. ಅವರ ಒಂದಷ್ಟು ಫೋಟೋಗಳು ವೈರಲ್​ ಆಗಿವೆ.

ಶ್ರೀದೇವಿ ಮಗಳು ಜಾನ್ವಿ ಕಪೂ​ರ್​ ಅವರು ಹಿಂದಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಆಗಾಗ ಹೊಸ ಫೋಟೋಶೂಟ್​ ಮಾಡಿಸುವ ಅವರು ಪಡ್ಡೆಗಳ ಕಣ್ಣು ಕುಕ್ಕುತ್ತಾರೆ. ಅವರ ಒಂದಷ್ಟು ಫೋಟೋಗಳು ವೈರಲ್​ ಆಗಿವೆ.

2 / 5

ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನಟಿ ಜಾನ್ವಿ ಕಪೂರ್​ ಅವರು ಹಾಜರಿ ಹಾಕಿದ್ದಾರೆ. ಮಿರಿ ಮಿರಿ ಮಿಂಚುವ ಕಾಸ್ಟ್ಯೂಮ್​ ಧರಿಸಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಅವರ ಈ ಗೆಟಪ್​ ನೋಡಿ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

3 / 5

ಜಾನ್ವಿ ಕಪೂರ್​ ಅವರು ಈಗ ಬಾಲಿವುಡ್​ಗೆ ಮಾತ್ರ ಸೀಮಿತವಾಗಿಲ್ಲ. ‘ಎನ್​ಟಿಆರ್​ 30’ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಆಗುವ ಮೂಲಕ ಅವರು ದಕ್ಷಿಣಕ್ಕೂ ಕಾಲಿಟ್ಟಿದ್ದಾರೆ. ಆ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ.

4 / 5

ಸೋಶಿಯಲ್​ ಮೀಡಿಯಾದಲ್ಲಿ ಜಾನ್ವಿ ಕಪೂರ್​ ಅವರು ಸಖತ್​ ಸಕ್ರಿಯರಾಗಿದ್ದಾರೆ. ಆಗಾಗ ಅವರು ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 2 ಕೋಟಿಗೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ.

5 / 5

ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ಜಾನ್ವಿ ಕಪೂರ್​ ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಪ್ರತಿ ಬಾರಿಯೂ ಅವರು ಆಕರ್ಷಕ ಉಡುಗೆ ಧರಿಸಿ ಫೋಟೋಶೂಟ್​ ಮಾಡಿಸುತ್ತಾರೆ. ಆ ಮೂಲಕ ಲಕ್ಷಾಂತರ ಲೈಕ್ಸ್​ ಪಡೆಯುತ್ತಾರೆ.

Published On - 11:23 am, Sun, 9 April 23

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us