- Kannada News Photo gallery Odisha Train Accident, Here are the photos of the terrible train accident in Balasore, Odisha
Odisha Train Accident: ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ದುರಂತದ ಪೋಟೋಸ್ ಇಲ್ಲಿವೆ
ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ. ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
Updated on: Jun 03, 2023 | 9:30 AM

ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ.

ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು.

ಇನ್ನು ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ, ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ.

ಕೆಲ ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸಪ್ರೆಸ್ (ರೈಲು ಸಂಖ್ಯೆ 12864) ಸಹ, ಹಳಿತಪ್ಪಿದ್ದ ಕೋರಮಂಡಲ್ನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

ಇದರಿಂದ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ಹೇಳಿದ್ದಾರೆ.

ರೈಲು ಅಪಘಾತದಲ್ಲಿ ಮೃತ ಪಟ್ಟವರ ಸಂಖ್ಯೆ 280 ಕ್ಕೆ ಎರಿಕೆಯಾಗಿದ್ದು, 900 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್‌ಡಿಆರ್‌ಎಫ್) ಮೂರು ತಂಡಗಳು ಮತ್ತು ಒಡಿಶಾದ ಡಿಆರ್‌ಎಫ್‌ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದೆ.

ಇನ್ನು ಘಟನಾ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

ಇನ್ನು ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್ ಆಗಿದ್ದಾರೆ ಎಂದು ರೈಲ್ವೆ ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.




