- Kannada News Photo gallery on the occasion of Women's Day All-Women team operated Hubballi Airport services successfully
ಮಹಿಳಾ ದಿನ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಡೀ ಕಾರ್ಯಾಚರಣೆ ಸಂಪೂರ್ಣವಾಗಿ ಸುರಕ್ಷಿತವಾಗಿ ಮಹಿಳಾ ತಂಡದ ಸುಪರ್ದಿಯಲ್ಲಿತ್ತು!
ಅದೊಂದು ಚಿಕ್ಕ ಹೆಜ್ಜೆ! ಆದರೆ ಆಗಸಕ್ಕೇ ಕೈ ಚಾಚುವ ಛಾತಿ ಅವರಲ್ಲಿತ್ತು! ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಡೀ ಕಾರ್ಯಾಚರಣೆ ಸಂಪೂರ್ಣವಾಗಿ ಸುರಕ್ಷಿತವಾಗಿ ಮಹಿಳಾ ತಂಡದ ಸುಪರ್ದಿಯಲ್ಲಿತ್ತು.
Updated on: Mar 09, 2023 | 11:45 AM

ಅದೊಂದು ಚಿಕ್ಕ ಹೆಜ್ಜೆ! ಆದರೆ ಆಗಸಕ್ಕೇ ಕೈ ಚಾಚುವ ಛಾತಿ ಅವರಲ್ಲಿತ್ತು! ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಡೀ ಕಾರ್ಯಾಚರಣೆ ಸಂಪೂರ್ಣವಾಗಿ ಸುರಕ್ಷಿತವಾಗಿ ಮಹಿಳಾ ತಂಡದ ಸುಪರ್ದಿಯಲ್ಲಿತ್ತು.

ನಿನ್ನೆ ಬುಧವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಡೀ ಹಬ್ ಸಂಪೂರ್ಣವಾಗಿ ಸುರಕ್ಷಿತವಾಗಿ ಮಹಿಳಾ ತಂಡದ ಸುಪರ್ದಿಯಲ್ಲಿತ್ತು.

ಮಹಿಳಾ ತಂಡವು ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಗಳನ್ನು ನಿರ್ವಹಿಸಿತು. ಇದೇ ಮೊದಲ ಬಾರಿಗೆ ಇಂತಹ ಅಪರೂಪದ ಸನ್ನಿವೇಶಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ಸಾಕ್ಷಿಯಾಯಿತು.

ಯಾವುದೇ ವಿಮಾನ ನಿಲ್ದಾಣಗಳಲ್ಲಿ ಏರ್ ಟ್ರಾಫಿಕ್ ಸೇವೆಯನ್ನು (ATS) ನಿರ್ವಹಿಸುವುದು ಆಯಕಟ್ಟಿನ ಮತ್ತು ಅತ್ಯಂತ ಜವಾಬ್ದಾರಿಯುತ ಕಾರ್ಯಗಳಲ್ಲಿ ಒಂದಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಎಟಿಎಸ್ ಅನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು.

ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮತ್ತು ಇತರ ಪ್ರಮುಖ ವಿಭಾಗಗಳನ್ನು ಸಹ ಮಹಿಳಾ ಸಿಬ್ಬಂದಿಯೇ ಯಶಸ್ವಿಯಾಗಿ ನಿರ್ವಹಿಸಿದರು. ಈ ಹಿಂದೆ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಸೇರಿ ಎಟಿಎಸ್ ಅನ್ನು ನಿರ್ವಹಿಸುತ್ತಿದ್ದರು.

ಅಂತರಾಷ್ಟ್ರೀಯ ಮಟ್ಟದ ಮಹಿಳಾ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ಬಯಸಿದ್ದರು. ಇದರ ಅಂಗವಾಗಿ ಮಹಿಳಾ ಸಿಬ್ಬಂದಿಯ ಸೇವೆಗಳನ್ನು ಮಾತ್ರವೇ ಬಳಸಿಕೊಂಡು ವಿಮಾನ ನಿಲ್ದಾಣವನ್ನು ನಿರ್ವಹಿಸುವ ಯೋಜನೆ ರೂಪಿತವಾಗಿತ್ತು. ಎಲ್ಲಾ ಮಹಿಳಾ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿಯನ್ನು ಬೆಳಗಿನ ಪಾಳಿಯಲ್ಲಿ ನಿಯೋಜಿಸಲಾಗಿತ್ತು ಮತ್ತು ಅವರು ಯಶಸ್ವಿಯಾಗಿ ನಿರ್ವಹಿಸಿದರು.

ಈ ಹಿನ್ನೆಲೆಯಲ್ಲಿ ಬುಧವಾರ ವಿಮಾನ ನಿಲ್ದಾಣದಲ್ಲಿ ಹಬ್ಬದ ವಾತಾವರಣವಿತ್ತು. ಮಹಿಳಾ ಸಿಬ್ಬಂದಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಪ್ರಮುಖ ಕಾರ್ಯಗಳನ್ನು ನಿರ್ವಹಿಸಿದ ನಂತರ, ಸಮಾರಂಭದಲ್ಲಿ ಎಲ್ಲಾ ಮಹಿಳಾ ಸಿಬ್ಬಂದಿಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಸ್ವಚ್ಛತಾ ಸಿಬ್ಬಂದಿಯಿಂದ ಹಿಡಿದು ಅಧಿಕಾರಿಗಳವರೆಗೆ ಎಲ್ಲರನ್ನೂ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಆಟಗಳು, ಸ್ಪರ್ಧೆಗಳು, ಊಟ ಮತ್ತು ಇತರ ಚಟುವಟಿಕೆಗಳನ್ನೊಳಗೊಂಡ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಟ್ರಾಫಿಕ್ ಸೇವೆ (ATS) ನಿರ್ವಹಿಸಿದ ಐದು ಮಹಿಳಾ ಅಧಿಕಾರಿಗಳು ಸೇರಿದಂತೆ ವಿಮಾನ ನಿಲ್ದಾಣದಲ್ಲಿ ಸಹಾಯಕ ಸಿಬ್ಬಂದಿಹಯನ್ನು ಎಲ್ಲ ಸಂವಹನ ವಿಭಾಗ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ನಿಯೋಜಿಸಲಾಗಿತ್ತು.

ಉಳಿದ ಕೆಲ ಸಹಾಯಕ ಸಿಬ್ಬಂದಿಯನ್ನು ಇತರ ಇಲಾಖೆಗಳಿಗೂ ನಿಯೋಜಿಸಲಾಗಿತ್ತು. ಅವರೆಲ್ಲರೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸಿದರು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಾದ ಪ್ರಮೋದ್ ಠಾಕ್ರೆ ಹರ್ಷ ವ್ಯಕ್ತಪಡಿಸಿದರು.




