ಭಾರತದಲ್ಲಿ ಒನ್ ಪ್ಲಸ್ ಕಂಪನಿ ತನ್ನ ಬಹುನಿರೀಕ್ಷಿತ ಒನ್ ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಫೋನನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್ಫೋನ್ ಅತ್ಯಂತ ಬಲಿಷ್ಠವಾದ ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದ್ದು, ನಾಲ್ಕು ಪಟ್ಟು ವೇಗದ ಕೃತಕ ಬುದ್ಧಿಮತ್ತೆ (AI) ಸಂಸ್ಕರಣೆ ಮತ್ತು ಕೊನೆಯ ತಲೆಮಾರಿನ ಸ್ನಾಪ್ಡ್ರಾಗನ್ ಚಿಪ್ಗಿಂತ 25% ಹೆಚ್ಚು ಪರಿಣಾಮಕಾರಿ ಗ್ರಾಫಿಕ್ಸ್ ಕಾರ್ಯಕ್ಷಮತೆಯನ್ನು ನೀಡಲಿದೆ.
1 / 5
ಇದು 1,440×3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್ ಅಮೋಲೆಡ್ ಡಿಸ್ ಪ್ಲೇಯನ್ನು ಹೊಂದಿದೆ. ಈ ಡಿಸ್ ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ. ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.