One Plus 10 Pro: 66,999 ರೂ. ಬೆಲೆಯ ಹೊಸ ಒನ್​ಪ್ಲಸ್ 10 ಪ್ರೊ ಫೋನ್ ಖರೀದಿಸಬಹುದೇ?

Updated on: Apr 02, 2022 | 6:35 AM

One Plus 10 Pro Review: ಭಾರತದಲ್ಲಿ ಒನ್ ಪ್ಲಸ್ ಕಂಪನಿ ತನ್ನ ಬಹುನಿರೀಕ್ಷಿತ ಒನ್ ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಫೋನನ್ನು ಅನಾವರಣ ಮಾಡಿದೆ.

1 / 5
ಭಾರತದಲ್ಲಿ ಒನ್ ಪ್ಲಸ್ ಕಂಪನಿ ತನ್ನ ಬಹುನಿರೀಕ್ಷಿತ ಒನ್ ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಫೋನನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್ಫೋನ್ ಅತ್ಯಂತ ಬಲಿಷ್ಠವಾದ ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದ್ದು, ನಾಲ್ಕು ಪಟ್ಟು ವೇಗದ ಕೃತಕ ಬುದ್ಧಿಮತ್ತೆ (AI) ಸಂಸ್ಕರಣೆ ಮತ್ತು ಕೊನೆಯ ತಲೆಮಾರಿನ ಸ್ನಾಪ್ಡ್ರಾಗನ್ ಚಿಪ್ಗಿಂತ 25% ಹೆಚ್ಚು ಪರಿಣಾಮಕಾರಿ ಗ್ರಾಫಿಕ್ಸ್ ಕಾರ್ಯಕ್ಷಮತೆಯನ್ನು ನೀಡಲಿದೆ.

ಭಾರತದಲ್ಲಿ ಒನ್ ಪ್ಲಸ್ ಕಂಪನಿ ತನ್ನ ಬಹುನಿರೀಕ್ಷಿತ ಒನ್ ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಫೋನನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್ಫೋನ್ ಅತ್ಯಂತ ಬಲಿಷ್ಠವಾದ ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದ್ದು, ನಾಲ್ಕು ಪಟ್ಟು ವೇಗದ ಕೃತಕ ಬುದ್ಧಿಮತ್ತೆ (AI) ಸಂಸ್ಕರಣೆ ಮತ್ತು ಕೊನೆಯ ತಲೆಮಾರಿನ ಸ್ನಾಪ್ಡ್ರಾಗನ್ ಚಿಪ್ಗಿಂತ 25% ಹೆಚ್ಚು ಪರಿಣಾಮಕಾರಿ ಗ್ರಾಫಿಕ್ಸ್ ಕಾರ್ಯಕ್ಷಮತೆಯನ್ನು ನೀಡಲಿದೆ.

2 / 5

ಇದು 1,440×3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್ ಅಮೋಲೆಡ್ ಡಿಸ್ ಪ್ಲೇಯನ್ನು ಹೊಂದಿದೆ. ಈ ಡಿಸ್ ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ. ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

3 / 5

ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

4 / 5

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್ ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್ ವೂಕ್ ವಾಯರ್ ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.

5 / 5

ಇದರ ಬೇಸ್ ಮಾಡೆಲ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 66,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM ಮತ್ತು 256GB ಸ್ಟೋರೇಜ್ ಮಾಡೆಲ್ ಆಯ್ಕೆಗೆ 71,999 ರೂ. ಬೆಲೆ ಇದೆ. ಇದೊಂದು ಹೈ ರೇಂಜ್ ಮಾದರಿಯ ಫೋನ್ ಆಗಿದ್ದು ಪ್ರೊಸೆಸರ್, ಡಿಸ್ ಪ್ಲೇ ಇದರ ಕಾರ್ಯನಿರ್ವಹಣೆಯನ್ನು ಗಮನಿಸಿದರೆ ಗೇಮಿಂಗ್ ಗೆ ಹೇಳಿ ಮಾಡಿಸಿದ್ದಾಗಿದೆ. ಜೊತೆಗೆ ಇದರ ಕ್ಯಾಮೆರಾ ಅತ್ಯುತ್ತಮವಾಗಿದ್ದು, ನೀವು ಫೋಟೋಗ್ರಫಿ ಮಾಡುವವರಾಗಿದ್ದರೆ ಖರೀದಿಸಬಹುದು.

Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Loading...
Unable to load recommendations.
Follow Us