
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಯಾವುದೇ ಮೇಳಗಳು ನಡೆಯುತ್ತಿಲ್ಲ. ಆದರೂ ಆಯ್ದ ಕೆಲ ಸ್ಮಾರ್ಟ್ಫೋನ್ಗಳು ಬಂಪರ್ ಡಿಸ್ಕೌಂಟ್ನಲ್ಲಿ ಮಾರಾಟ ಆಗುತ್ತಿದೆ. ಭಾರತದಲ್ಲಿ ಈ ವರ್ಷ ಲಾಂಚ್ ಆಗಿದ್ದ ಒನ್‌ಪ್ಲಸ್ ಕಂಪನಿಯ ಪವರ್ಫುಲ್ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಈಗ ಅಮೆಜಾನ್ನಲ್ಲಿ (Amazon) ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಭಾರತದಲ್ಲಿ ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಒಟ್ಟು ಎರಡು ಮಾದರಿಯಲ್ಲಿ ಅನಾವರಣಗೊಂಡಿತ್ತು. ಇದರ ಬೇಸ್ ಮಾಡೆಲ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 66,999 ರೂ. ಮತ್ತು 12GB RAM ಮತ್ತು 256GB ಸ್ಟೋರೇಜ್ ಮಾಡೆಲ್ ಆಯ್ಕೆಗೆ 71,999 ರೂ. ಬೆಲೆ ಇದೆ.

ಇದೀಗ ಅಮೆಜಾನ್ನಲ್ಲಿ ಈ ಫೋನಿನ 8GB RAM ರೂಪಾಂತರವನ್ನು 61,999 ರೂ. ಗೆ ಖರೀದಿಸಬಹುದು. ಅದೇ ರೀತಿ 12GB + 256GB ವೇರಿಯಂಟ್ ಬೆಲೆಯು 66,999 ರೂ. ಆಗಿದೆ. ಅಲ್ಲದೆ ಯ್ದ ಕ್ರೆಡಿಟ್ ಕಾರ್ಡ್ಗಳಿಗೆ 2,000 ರೂ. ಗಳ ಡಿಸ್ಕೌಂಟ್ ಸಿಗಲಿದೆ. 25,000 ರೂ. ವರೆಗೆ ಎಕ್ಸ್ಚೇಂಜ್ ಆಫರ್ ಕೂಡ ನೀಡಲಾಗಿದೆ.

ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ ಇದು 1,440×3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ–ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ–ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.

ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದರ ಜೊತೆಗೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಗಳನ್ನು ನೀಡಲಾಗಿದೆ.