Oppo A76: ಅತ್ಯಂತ ಕಡಿಮೆ ಬೆಲೆಗೆ ಭರ್ಜರಿ ಕ್ಯಾಮೆರಾ, ಬ್ಯಾಟರಿಯ ಒಪ್ಪೋ A76 ಫೋನ್ ಬಿಡುಗಡೆ

Oppo A76: ಒಪ್ಪೋ ಸಂಸ್ಥೆ ಇದೀಗ ಭಾರತದಲ್ಲಿ ಹೊಸ ಒಪ್ಪೋ ಎA76 ಸ್ಮಾರ್ಟ್ ಫೋನ್ ಅನ್ನು ಲಾಂಚ್ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾದಿಂದ ಆವೃತ್ತವಾಗಿದೆ.

|

Updated on:Mar 19, 2022 | 1:12 PM

ಬಜೆಟ್ ಬೆಲೆಯ ಸ್ಮಾರ್ಟ್ ಫೋನ್ಗೂ ಸೈ ಮಿಡ್ ರೇಂಜ್ ಮೊಬೈಲ್ಗೂ ರೆಡಿ ಎಂಬಂತೆ ಆಕರ್ಷಕ ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ ಸಂಸ್ಥೆ ಇದೀಗ ಭಾರತದಲ್ಲಿ ಹೊಸ ಒಪ್ಪೋ ಎA76 (Oppo A76) ಸ್ಮಾರ್ಟ್ ಫೋನ್ ಅನ್ನು ಲಾಂಚ್ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾದಿಂದ ಆವೃತ್ತವಾಗಿದೆ.

1 / 5
ಒಪ್ಪೋ A76 ಸ್ಮಾರ್ಟ್ ಫೋನ್ 720×1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.56 ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಹಾಗೂ 600 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ಒಎಸ್ 11.1 ಔಟ್-ಆಫ್-ದಿ-ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

2 / 5
ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

3 / 5
ಒಪ್ಪೋ A76 ಸ್ಮಾರ್ಟ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, 802.11a/b/g/n/ac ಜೊತೆಗೆ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್-C, USB OTG, ಮತ್ತು 3.5mm ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ.

4 / 5
ಒಪ್ಪೋ A76 ಸ್ಮಾರ್ಟ್ ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 17,499 ರೂ. ನಿಗದಿ ಮಾಡಲಾಗಿದೆ.

5 / 5

Published On - 12:25 pm, Sat, 19 March 22

Follow us
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ