AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರವೂ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಕಳೆದ ವಾರ ಕೆಲ ಸೂಪರ್ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿದ್ದವು. ಅದರಲ್ಲೂ ಈ ಸಂಕ್ರಾಂತಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಕೆಲವು ಸಿನಿಮಾಗಳು ಕಳೆದ ವಾರ ಒಟಿಟಿಗೆ ಲಗ್ಗೆ ಇಟ್ಟಿದ್ದವು. ಈ ವಾರವೂ ಸಹ ಕೆಲ ಒಳ್ಳೆಯ, ಬಾಕ್ಸ್ ಆಫೀಸ್​​ನಲ್ಲಿ ಸೂಪರ್ ಹಿಟ್ ಆಗಿರುವ ಸಿನಿಮಾಗಳು ಒಟಿಟಿಗೆ ಬಂದಿವೆ. ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Feb 14, 2026 | 4:54 PM

Share
ತೆಲುಗಿನ ಜನಪ್ರಿಯ ಹಾಸ್ಯ ನಟ ನವೀನ್ ಪೋಲಿಶೆಟ್ಟಿ ನಟಿಸಿರುವ ಹಾಸ್ಯಮಯ ಸಿನಿಮಾ ‘ಅನಗನಗ ಒಕ ರಾಜು’ ಇದೇ ವಾರ ಒಟಿಟಿಗೆ ಬಂದಿದೆ. ಅಸಲಿಗೆ ಈ ಸಿನಿಮಾ ಸಹ ಸಂಕ್ರಾಂತಿ ಹಬ್ಬಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ, ಒಳ್ಳೆಯ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು.

1 / 5
ಕಮ್ ಬ್ಯಾಕ್ ಮಾಡಿರುವ ಮಲಯಾಳಂ ಸ್ಟಾರ್ ನಟ ನಿವಿನ್ ಪಾಲಿ ಅವರ ಹೊಸ ಸಿನಿಮಾ ‘ಬೇಬಿ ಗರ್ಲ್’ ಈ ವಾರ ಒಟಿಟಿಗೆ ಬಂದಿದೆ. ಜನವರಿಯಲ್ಲಿ ಬಿಡುಗಡೆ ಆಗಿದ್ದ ಈ ಮೆಡಿಕಲ್ ಥ್ರಿಲ್ಲರ್ ಸಿನಿಮಾ ಇದೀಗ ಒಟಿಟಿಗೆ ಬಂದಿದ್ದು, ಸೋನಿ ಲಿವ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 5
‘ಕಾಂಜುರಿಂಗ್’ ಸಿನಿಮಾ ಸರಣಿ ವಿಶ್ವದ ಬಲು ಜನಪ್ರಿಯ ಹಾರರ್ ಸಿನಿಮಾ ಸರಣಿಗಳಲ್ಲಿ ಒಂದಾಗಿದೆ. ಇತ್ತೀಚೆಗಷ್ಟೆ ಕಾಂಜುರಿಂಗ್ ಸರಣಿಯ ಹೊಸ ಸಿನಿಮಾ ‘ದಿ ಕಾಂಜುರಿಂಗ್: ದಿ ಲಾಸ್ಟ್ ರೈಟ್ಸ್’ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಈ ವಾರ ಈ ಸಿನಿಮಾ ಒಟಿಟಿಗೆ ಬಂದಿದ್ದು, ಜಿಯೋ ಹಾಟ್​​ಸ್ಟಾರ್​​ನಲ್ಲಿ ಸಿನಿಮಾವನ್ನು ವೀಕ್ಷಿಸಬಹುದಾಗಿದೆ.

3 / 5
ಸಂಕ್ರಾಂತಿಗೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆದ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮೆಗಾಸ್ಟಾರ್ ಚಿರಂಜೀವಿಯನ್ನು ಸೋಲಿನ ಸುಳಿಯಿಂದ ಮೇಲಕ್ಕೆತ್ತಿದ ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ. ನಟಿ ನಯನತಾರಾ ಸಿನಿಮಾದ ನಾಯಕಿ.

4 / 5
ತಮಿಳಿನಲ್ಲಿ ಇತ್ತೀಚೆಗೆ ಬಿಡುಗಡೆ ಆಗಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ‘ತಲೈವರ್ ತಂಬಿ ತಲೈಮಯಿಲ್’ ಸಿನಿಮಾ. ಸಣ್ಣ ಹಳ್ಳಿಯೊಂದರ ಪಂಚಾಯಿತಿ ಅಧ್ಯಕ್ಷನೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ನೆಟ್​ಫ್ಲಿಕ್ಸ್​​ನಲ್ಲಿ ಇದೇ ವಾರ ಬಿಡುಗಡೆ ಆಗಿದೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ