‘ಕಿರಾತಕ’ ಸುಂದರಿ ಓವಿಯಾ ಈಗೇನು ಮಾಡುತ್ತಿದ್ದಾರೆ? ಇಲ್ಲಿದೆ ವಿವರ

Updated on: May 21, 2026 | 7:31 AM

ರಾಕಿಂಗ್ ಸ್ಟಾರ್ ಯಶ್ ಜೊತೆ 'ಕಿರಾತಕ' ಚಿತ್ರದಲ್ಲಿ ನೇತ್ರಾ ಪಾತ್ರದಲ್ಲಿ ನಟಿಸಿದ್ದರು ಓವಿಯಾ. ಆ ಹಳ್ಳಿ ಹುಡುಗಿ ಪಾತ್ರದ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ನಂತರ ತಮಿಳು ಬಿಗ್ ಬಾಸ್ ರಿಯಾಲಿಟಿ ಶೋನಿಂದ ಅಪಾರ ಜನಪ್ರಿಯತೆ ಗಳಿಸಿದರು. ಪ್ರಸ್ತುತ ಸಿನಿಮಾ ಕ್ಷೇತ್ರದಿಂದ ದೂರವಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಓವಿಯಾ, ತಮ್ಮ ಹೊಸ ರೂಪ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

1 / 6
ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ.

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ.

2 / 6

ಕಿರಾತಕ ಚಿತ್ರದ ಭರ್ಜರಿ ಯಶಸ್ಸಿನ ನಂತರ ಓವಿಯಾ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಬದಲಿಗೆ ಅವರು ತಮಿಳು ಚಿತ್ರರಂಗದತ್ತ ಗಮನ ಹರಿಸಿದರು. ಅಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ (2017) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದರು.

3 / 6

ಪ್ರಸ್ತುತ ಓವಿಯಾ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯವಾಗಿಲ್ಲ. ಅಪರೂಪಕ್ಕೆ ಒಮ್ಮೆ ಎನ್ನುವಂತೆ ವರ್ಷಕ್ಕೊಂದು ಸಿನಿಮಾವನ್ನು ಮಾತ್ರ ಮಾಡುತ್ತಿದ್ದಾರೆ. ಕಥೆ ಇಷ್ಟವಾದರೆ ಮಾತ್ರ ಅವರು ಹೊಸ ಪ್ರಾಜೆಕ್ಟ್‌ ಒಪ್ಪಿಕೊಂಡು ಬಣ್ಣ ಹಚ್ಚುತ್ತಿದ್ದಾರೆ ಎನ್ನಲಾಗಿದೆ.

4 / 6

ಸಿನಿಮಾಗಳಿಂದ ದೂರ ಸರಿದಿದ್ದರೂ ಕೂಡ ಓವಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಇನ್‌ಸ್ಟಾಗ್ರಾಮ್ ಮೂಲಕ ತಮ್ಮ ವೈಯಕ್ತಿಕ ವಿಚಾರಗಳು ಮತ್ತು ಹೊಸ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

5 / 6

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಇವರು, ಸಮಾಜದಲ್ಲಿ ನಡೆಯುವ ಪ್ರಚಲಿತ ವಿದ್ಯಮಾನಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇತ್ತೀಚಿನ ವಿವಾದಾತ್ಮಕ ವಿಷಯಗಳ ಬಗ್ಗೆಯೂ ನೇರವಾಗಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

6 / 6

ಅಂದು ಯಶ್ ಜೊತೆ ಹಳ್ಳಿ ಹುಡುಗಿ ನೇತ್ರಾ ಆಗಿ ಮಿಂಚಿದ್ದ ಓವಿಯಾ, ಇಂದು ಗ್ಲಾಮರಸ್ ಆಗಿ ಬದಲಾಗಿದ್ದಾರೆ. ಸಿನಿಮಾಗಳ ಸಂಖ್ಯೆ ಕಡಿಮೆ ಮಾಡಿದ್ದರೂ ಸಾಮಾಜಿಕ ಜಾಲತಾಣಗಳ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us