- Kannada News Photo gallery Padma Awards 2023 President Droupadi Murmu confers Padma awards to Naatu Naatu music composer MM Keeravani Sudha Murty SL Bhyrappa and others
Padma Awards 2023: ‘ನಾಟು ನಾಟು’ ಸಂಗೀತ ಸಂಯೋಜಕ ಕೀರವಾಣಿ, ಸುಧಾಮೂರ್ತಿ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ
ಪದ್ಮ ಪ್ರಶಸ್ತಿ 2023: ನಾಟು ನಾಟು ಹಾಡಿನ ಸಂಗೀತ ಸಂಯೋಜಕ ಎಂ.ಎಂ.ಕೀರವಾಣಿ, ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ, ಸಾಹಿತಿ ಎಸ್.ಎಲ್.ಭೈರಪ್ಪ ಸೇರಿದಂತೆ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
Updated on:Apr 05, 2023 | 8:23 PM

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2023ರ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. (Photo: ANI/PIB)

ನಾಟು ನಾಟು ಹಾಡಿನ ಸಂಗೀತ ಸಂಯೋಜಕ ಎಂ.ಎಂ.ಕೀರವಾಣಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. (Photo: ANI/PIB)

ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. (Photo: ANI/PIB)

ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. (Photo: ANI/PIB)

ನಟಿ ರವೀನಾ ಟಂಡನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. (Photo: ANI/PIB)

ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. (Photo: ANI/PIB)

ಆಧ್ಯಾತ್ಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ತ್ರಿದಂಡಿ ಚಿನ್ನಜೀಯಾರ್ ಸ್ವಾಮೀಜಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. (Photo: ANI/PIB)

ಶಾ ರಶೀದ್ ಅಹ್ಮದ್ ಖಾದ್ರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. (Photo: ANI/PIB)

ಸಮಾಜವಾದಿ ಪಕ್ಷದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಅವರ ಪುತ್ರ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಶಸ್ತಿ ಸ್ವೀಕರಿಸಿದರು. (Photo: ANI/PIB)
Published On - 8:20 pm, Wed, 5 April 23




